ಎರಡು ಶಾಲೆಗಳ 30 ಕ್ಕೂ ಹೆಚ್ಚು ವಿದ್ಯಾರ್ಥಿ ಗಳಲ್ಲಿ ಕರೋನ ತರಗತಿಗಳಿಗೆ ರಜೆ ಘೋಷಣೆ…..

Suddi Sante Desk

ಬೆಂಗಳೂರು –

ಬಿಬಿಎಂಪಿಯ ದಾಸರಹಳ್ಳಿ ವಲಯದ ಎರಡು ಶಾಲೆಯ ಒಟ್ಟು 31 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಕಾಣಿಸಿ ಕೊಂಡಿದ್ದು ಸೋಂಕಿತರು ಪತ್ತೆಯಾದ ತರಗತಿಯ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ.

ದಾಸರಹಳ್ಳಿ ವಲಯದ ಪೀಣ್ಯ ಎರಡನೇ ಹಂತದ ಖಾಸಗಿ ಶಾಲೆಯ 5ನೇ ತರಗತಿಯ 10 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.

ದಾಸರಹಳ್ಳಿ ವಲಯದ ಪೀಣ್ಯ ಎರಡನೇ ಹಂತದ ಖಾಸಗಿ ಶಾಲೆಯ 5ನೇ ತರಗತಿಯ 10 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.ಕಳೆದ ಗುರುವಾರ ರಾಜಗೋಪಾಲ ನಗರದ ಖಾಸಗಿ ಶಾಲೆಯ 5 ಮತ್ತು 6ನೇ ತರಗತಿಯ ಒಟ್ಟು 21 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿತ್ತು.ಸೋಂಕು ಪತ್ತೆಯಾದ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ರಜೆ ನೀಡಲಾಗಿದೆ.

ಉಳಿದ ಎಲ್ಲ ವಿದ್ಯಾರ್ಥಿಗಳು,ಶಿಕ್ಷಕರು ಹಾಗೂ ಇತರೆ ಸಿಬ್ಬಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಕೊಠಡಿ ಹಾಗೂ ಆವರಣಕ್ಕೆ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಿ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗುತ್ತಿದೆ ಎಂದು ದಾಸರಹಳ್ಳಿ ವಲಯದ ಆರೋಗ್ಯ ವೈದ್ಯಾಧಿಕಾರಿ ಸುರೇಶ್ ರುದ್ರಪ್ಪ ಮಾಹಿತಿ ನೀಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.