ಬೆಂಗಳೂರು –
ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ

ರಾಜ್ಯದಲ್ಲಿ ಈಗಾಗಲೇ ಲಾಕ್ ಡೌನ್ ಇದೆ ಮೂರು ದಿನಗಳಲ್ಲಿ ಇದು ಮುಕ್ತಾಯವಾಗಲಿದ್ದು ಹೀಗಾಗಿ ಕರೋನ ನಿಯಂತ್ರಣ ಮಾಡುವ ಉದ್ದೇಶದಿಂದ ಲಾಕ್ ಡೌನ್ ಮುಕ್ತಾಯವಾಗುವ ಮುನ್ನವೇ ಯಡಿಯೂರಪ್ಪ ರಾಜ್ಯದಲ್ಲಿ ಹದಿನಾಲ್ಕು ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದರು. ಇದರೊಂದಿಗೆ ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮತ್ತೊಂದು ಹಂತದ ಹದಿನಾಲ್ಕು ದಿನಗಳ ಕಾಲದ ಎರಡನೇ ಲಾಕ್ ಡೌನ್ ವಿಸ್ತರಣೆ ಮಾಡಿದೆ.