ಬೆಂಗಳೂರು –
ರಾಜ್ಯದಲ್ಲಿನ ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ಸಚಿವ ಸುರೇಶ್ ಕುಮಾರ್ ಮತ್ತೆ ಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ವಿದ್ಯಾರ್ಥಿ ಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವುದು ಬಹಳ ಮುಖ್ಯ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಶಿಕ್ಷಣ ಇಲಾಖೆಯು ಆಯೋಜಿಸಿದ್ದ ಸಭೆಯಲ್ಲಿ ಎಲ್ಲ ರಾಜ್ಯಗಳ ಶಿಕ್ಷಣ ಸಚಿವರು ಭಾಗವಹಿಸಿದ್ದರು.

ರಾಜ್ಯ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವ ರು ಕೂಡ ಭಾಗವಹಿಸಿದ್ದರು.ಸಭೆಯಲ್ಲಿ ಮಾತನಾಡಿ ದ ಸಚಿವ ಸುರೇಶ್ ಕುಮಾರ್,ವೃತ್ತಿಪರ ಶಿಕ್ಷಣಕ್ಕೆ ಸನ್ನದ್ಧರಾಗುವ ಹಂತದಲ್ಲಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯಾವುದಾದರೂ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಬೇಕಾದ್ದು ಅನಿವಾರ್ಯ. ಕೋವಿಡ್ ಸಂಪೂರ್ಣವಾಗಿ ಹತೋಟಿಗೆ ಬಂದ ನಂತರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿ ಆದರೂ ಪರೀಕ್ಷೆಗಳನ್ನು ನಡೆಸುವುದು ಸಮರ್ಪಕ ಎಂದರು.

ಪ್ರಸ್ತುತ ಕೊರೋನಾ ಎಲ್ಲೆಡೆ ತೀವ್ರವಾಗಿ ಹರಡು ತ್ತಿದ್ದು ರಾಜ್ಯದಲ್ಲಿ ಎರಡನೇ ಅಲೆ ಹತೋಟಿಗೆ ಬಂದ ಕೂಡಲೇ 15-20 ದಿನಗಳ ಕಾಲಾವಕಾಶ ನೀಡಿ ಮುಂಚೆಯೇ ಪರೀಕ್ಷೆ ಗಳ ದಿನಾಂಕವನ್ನು ಪ್ರಕಟಿಸ ಲು ಸದ್ಯಕ್ಕೆ ತೀರ್ಮಾನಿಸಲಾಗಿದೆ. ಕೊರೋನಾ ಕಾರ ಣಕ್ಕಾಗಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಳ್ಳಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಹೊಸದಾಗಿ ಇನ್ನೊ ಮ್ಮೆ ಪರೀಕ್ಷೆ ಬರೆಯಲು ಇದೇ ಸಾಲಿನಲ್ಲಿ ಅವಕಾಶ ಕಲ್ಪಿಸಲು ಸಹ ರಾಜ್ಯ ಸರ್ಕಾರ ಯೋಚಿಸಿದೆ ಎಂದ ರು.