ಶಿವಮೊಗ್ಗ –
ಶಿಕ್ಷಕರೊಬ್ಬರ ಮನೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಕಳ್ಳತನ ನಡೆದ ಘಟನೆ ಶಿವಮೊಗ್ಗ ದಲ್ಲಿ ನಡೆದಿದೆ. ಹೌದು ಕೊರೊನಾ ವಾರಿಯರ್ ಆಗಿ ಕರ್ತವ್ಯಕ್ಕೆ ತೆರಳಿ ಕಾರ್ಯ ನಿರ್ವಹಿಸುತ್ತಿದ್ದ ಶಿಕ್ಷಕನ ಮನೆಯಲ್ಲಿ ಕಳ್ಳತನ ಮಾಡಲಾಗಿದೆ.
ನಗರದ ಸೋಮಯ್ಯ ಲೇಔಟ್ ನಲ್ಲಿ ಈ ಒಂದು ಘಟನೆ ನಡೆದಿದೆ.224 ಗ್ರಾಂ ಚಿನ್ನ 80 ಸಾವಿರ ನಗದು ಕಳ್ಳತನ ಮಾಡಿದ ಖದೀಮರು ಎಸ್ಕೇಪ್ ಆಗಿದ್ದಾರೆ.
ಶಿಕ್ಷಕ ಪ್ರಭಾಕರ್ ಎಂಬುವರ ಮನೆಯಲ್ಲಿ ಈ ಒಂದು ಕಳ್ಳತನ ನಡೆದಿದೆ.ಕೊರೊನಾ ಕಾರಣಕ್ಕೆ ಮನೆಯವರನ್ನು ಮನೆಗೆ ಕಳಿಸಿದ್ದ ಶಿಕ್ಷಕ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಕಳ್ಳರು ತಮ್ಮ ಕೈಚಳ ಕ ತೋರಿದ್ದಾರೆ.ಇನ್ನೂ ಸುದ್ದಿ ತಿಳಿದ ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು