ಮುಖ್ಯ ಶಿಕ್ಷಕ ಅಮಾನತು ‌ಕರ್ತವ್ಯ ಲೋಪ ಹಿನ್ನೆಲೆಯಲ್ಲಿ DDPI ಅವರಿಂದ ಅಮಾನತು ಮಾಡಿ ಆದೇಶ…..

Suddi Sante Desk

ಬಳ್ಳಾರಿ –

ಕರ್ತವ್ಯ ಲೋಪ ಹಿನ್ನಲೆಯಲ್ಲಿ ಬಳ್ಳಾರಿಯ ಮಿಲ್ಲರ್ ಪೇಟೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಪ್ರಕಾಶ ಟಿ. ಹಾಗೂ ಶಿಕ್ಷಕ ಮಲ್ಲಿ ಕಾರ್ಜುನಪ್ಪ ಅವರನ್ನು ಅಮಾನತು ಮಾಡಲಾಗಿದೆ ಹೌದು ಶಾಲೆಯಲ್ಲಿ ದಾಖಲಾದ 8ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರೂ ಪುಸ್ತಕದಲ್ಲಿ ಹಾಜರಾತಿ ಹಾಕಿ ಕರ್ತವ್ಯಲೋಪ ಎಸಗಿರುವ ಹಿನ್ನೆಲೆ ಯಲ್ಲಿ ಅಮಾನತುಗೊಳಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರು(ಆಡಳಿತ) ತಿಳಿಸಿದ್ದಾರೆ.ಶಾಲೆಯಲ್ಲಿ ದಾಖಲಾದ 8ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ತರಗತಿಗೆ ಗೈರು ಹಾಜ ರಾಗಿದ್ದರು.

ಸದರಿ ಮಿಲ್ಲರಪೇಟೆ ಶಾಲಾ ಶಿಕ್ಷಕರು ಮಕ್ಕಳು ಗೈರು ಹಾಜ ರಾಗಿದ್ದರೂ ಹಾಜರಾತಿ ಪುಸ್ತಕದಲ್ಲಿ ಹಾಜರಾತಿ ಹಾಕಿ ಕರ್ತವ್ಯಲೋಪ ಎಸಗಿರುವ ಹಿನ್ನೆಲೆಯಲ್ಲಿ ಸದರಿ ಶಿಕ್ಷಕರು ಕರ್ನಾಟಕ ರಾಜ್ಯ ನಾಗರೀಕ ಸೇವಾ(ನಡತೆ) ನಿಯಮಗಳು 2021ರ ನಿಯಮಗಳನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಆ.1 ರಂದು ಅಮಾನುತುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.