ಲಕ್ನೋ –
ಹೃದಯಾಘಾತದಿಂದ ಬಿಜೆಪಿ ಶಾಸಕ ರೊಬ್ಬರು ಸಾವಿಗೀಡಾದ ಘಟನೆ ಉತ್ತರಪ್ರದೇಶದಲ್ಲಿ ನಡೆ ದಿದೆ.ಬಿಜೆಪಿ ಶಾಸಕ ದೇವೆಂದ್ರ ಪ್ರತಾಪ್ ಸಿಂಗ್ ಅವರು ಹೃದಯಘಾತದಿಂದ ನಿಧನರಾಗಿದ್ದಾರೆ ಐವತ್ತೈದು ವರ್ಷ ವಯಸ್ಸಿನ ಸಿಂಗ್ ಅವರು ಅಮಪುರ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿ ದ್ದು ಅವರಿಗೆ ಇದ್ದಕ್ಕಿದ್ದ ಹಾಗೆ ಎದೆ ನೋವು ಕಾಣಿಸಿ ಕೊಂಡಿತು.
ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಸತತ ಮೂರು ಭಾರಿ ಶಾಸಕರಾಗಿ ಆಯ್ಕೆಯಾಗಿ ಬಂದಿದ್ದ ಸಿಂಗ್ ಅವರ ನಿಧನಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಸಂತಾಪ ವ್ಯಕ್ತಪಡಿಸಿದ್ದಾರೆ. ಸಿಂಗ್ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ