ಆನ್ ಲೈನ್ ಆಟದಲ್ಲಿ ಕೋಟ್ಯಾಂತರ ರೂಪಾಯಿ ಗೆದ್ದಿದ್ದ ವನನ್ನೇ ಅಪಹರಣ ಬಂಧನ ಹುಬ್ಬಳ್ಳಿಯಲ್ಲಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…..

Suddi Sante Desk

ಹುಬ್ಬಳ್ಳಿ –

ಹೌದು ಆನ್‌ಲೈನ್‌ ಗೇಮ್‌ನಲ್ಲಿ ಹಣ ಗೆದ್ದಿದ್ದ ಯುವಕ ನೊರ್ವನನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಟೀಮ್ ನನ್ನು ಹುಬ್ಬಳ್ಳಿಯಲ್ಲಿ ಪೊಲೀಸರು ಬಂಧನ ಮಾಡಿದ್ದಾರೆ ಹೌದು ಹುಬ್ಬಳ್ಳಿಯ ಮಂಟೂರ ರಸ್ತೆಯ ನ್ಯಾಷನಲ್ ಟೌನ್ ನಿವಾಸಿ ಗರೀಬ್ ನವಾಜ್ ಮುಲ್ಲಾ ಅಪಹರಣ‌‌ ಪ್ರಕರಣ ಸುಖಾಂತ್ಯ ಕಂಡಿದೆ.ಇಂಜಿನಿಯರಿಂಗ್ ವಿದ್ಯಾರ್ಥಿ ಯಾಗಿದ್ದ ಗರೀಬ್ ನವಾಜ್ ಮುಲ್ಲಾ ನನ್ನು ಆಗಸ್ಟ್ 6 ರಂದು ಅಪಹರಿಸಿ ಒಂದು ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದರು ನಂತರ 15 ಲಕ್ಷ ರೂಪಾಯಿ ಕೊಡುವಂತೆ ಬೆದರಿಕೆ ಹಾಕಿ ಅಪಹರಣ ಮಾಡಿ ಎಸ್ಕೇಪ್ ಆಗಿದ್ದರು ಈ ಒಂದು ಪ್ರಕರಣ ಕುರಿತು ಕಾರ್ಯಾಚರಣೆ ಮಾಡಿದ ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧನ ಮಾಡಿದ್ದು ಕಳೆದ ರಾತ್ರಿ ಬೆಳಗಾವಿಯ ಕಿತ್ತೂರು ಬಳಿ ಹುಬ್ಬಳ್ಳಿಯ ಪೊಲೀಸರು ಬಂಧಿಸಿದ್ದಾರೆ.

ಹೌದು ಹುಬ್ಬಳ್ಳಿಯ ಮಹ್ಮದ್ ಆರಿಫ್,ಇಮ್ರಾನ್, ಅಬ್ದುಲ್ ಕರೀಮ್,ಹುಸೇನ್ ಸಾಬ್,ಇಮ್ರಾನ್ ಮದರಲಿ, ತೌಸಿಫ್ ಮತ್ತು ಮಹಮ್ಮದ್ ರಜಾಕ್ ಬಂಧಿತ ಆರೋಪಿ ಗಳಾಗಿದ್ದು ಗರೀಬ್ ನವಾಜ್ ಅಪಹರಣ ಆಗಿರುವ ಕುರಿತು ಆಗಸ್ಟ್ 6ರಂದು ಬೆಂಡಿಗೇರಿ ಪೊಲೀಸ್ ಠಾಣೆ ಯಲ್ಲಿ ಅವರ ತಂದೆ ದೂರು ದಾಖಲಿಸಿದ್ದರು.ಅಪಹರಣ ಕಾರರು ಗರೀಬ್ ನವಾಜ್ ತಂದೆಗೆ ಕರೆ ಮಾಡಿ ಒಂದು ಕೋಟಿ ಬೇಡಿಕೆ ಇಟ್ಟಿದ್ದರು.ಇದಕ್ಕೆ ಒಪ್ಪದಿದ್ದಾಗ 15 ಲಕ್ಷ ನೀಡಬೇಕು ಇಲ್ಲದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ‌ ಹಾಕಿದ್ದರು.

ನಗರದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಗರೀಬ್ ನವಾಜ್ ಹಾಗೂ ಆತನ ಸ್ನೇಹಿತ ದಿಲ್ವಾರ್, ಆನ್‌ ಲೈನ್ ನಲ್ಲಿ ಕ್ಯಾಸಿನೋ ಗೇಮ್ ಆಡಿ,ಸುಮಾರು ಕೋಟ್ಯಾಂತರ ಹಣ ಸಂಪಾದಿಸಿದ್ದರು.ಸ್ನೇಹಿತರ ಜೊತೆ ಸೇರಿ ಬೇಕಾಬಿಟ್ಟಿಯಾಗಿ ಹಣ ವೆಚ್ಚ ಮಾಡುತ್ತಿದ್ದ.ಅಲ್ಲದೆ, ಅಷ್ಟೊಂದು ಹಣ ತನ್ನಲ್ಲಿ ಇಟ್ಟುಕೊಳ್ಳಲು ಸಮಸ್ಯೆಯಾ ಗುತ್ತಿದೆ ಎಂದು ಆತನ ಸ್ನೇಹಿತ ಸಹ ಗರೀಬ್ ನವಾಜ್ ಖಾತೆಗೆ ಒಂದಷ್ಟು ಹಣ ವರ್ಗಾಯಿಸಿದ್ದ.

ಈ ವಿಷಯ ತಿಳಿದ ಆರೋಪಿತರು ಅವನ ಸ್ನೇಹಿತ ಮಹ್ಮದ್ ಆರೀಫ್ ಎಂಬುವವನ ಸಹಾಯ ಪಡೆದು ಗರೀಬ್ ನವಾಜ್ ನನ್ನು ಗೋಕುಲ ರಸ್ತೆಯ ಡೆಕ್ಲಥಾನ್ ಬಳಿ ಅಪಹರಿಸಿದ್ದರು.

ಕಮಿಷನರ್ ಲಾಭೂರಾಮ್ ನೇತೃತ್ವದಲ್ಲಿ ನಾಲ್ಕು ಪ್ರತ್ಯೇಕ ತನಿಖಾ‌ ತಂಡಗಳನ್ನು ರಚಿಸಲಾಗಿತ್ತು.ಇನ್ಸ್ಪೆಕ್ಟರ್ ಗಳಾದ ಶ್ಯಾಮರಾಜ ಸಜ್ಜನರ್,ಜಗದೀಶ ಹಂಚನಾಳ,ಜೆ.ಎಂ. ಕಾಲಿಮಿರ್ಚಿ ಮತ್ತು ರವಿಚಂದ್ರ ಬಡಫಕ್ಕೀರಪ್ಪನವರ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ಆರೋಪಿಗಳ ಮೊಬೈಲ್ ನೆಟ್‌ವರ್ಕ್ ಜಾಡು ಹಿಡಿದು ಅಪಹರಣಕಾ ರರನ್ನು ಯಶಸ್ವಿಯಾಗಿ ಬಂಧಿಸಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.