ಬೆಂಗಳೂರು –
SSLC, PUC, ಪರೀಕ್ಷಾ ವಿಚಾರ ಕುರಿತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಶಿಕ್ಷಣ ಸಚಿವರ ವಿರುದ್ಧ ಕಿಡಿಕಾರಿದ್ದಾರೆ.ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರದ ನಡೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವಂತ ಅವರು, ಕೋವಿಡ್ ಹಿನ್ನೆಲೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ.ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ.ಮತಿಗೆಟ್ಟಂತೆ ವರ್ತಿ ಸುತ್ತಿರುವ ಶಿಕ್ಷಣ ಸಚಿವರ ಐಲು-ಪೈಲು ನಿರ್ಧಾರ ಕಂಡು ರಾಜ್ಯದ ಜನತೆ ಹಾದಿ ಬೀದಿಯಲ್ಲಿ ನಗುವಂತಾಗಿದೆ ಎಂದು ಕಿಡಿಕಾರಿದ್ದಾರೆ.

ಪ್ರಜಾಪ್ರಭುತ್ವದ ಮೂರು ಮಂಗಗಳು ನಾಚುವಂತೆ ವರ್ತಿಸುತ್ತಿರುವ ಸರ್ಕಾರದ ಎಡಬಿಡಂಗಿತನ ಮತ್ತು ಮಹಾಮೌನ ಕಂಡು ಜನತೆ ಹಾದಿ ಬೀದಿಯಲ್ಲಿ ನಗುವಂತಾಗಿದೆ ಎಂದರು. ಇದರೊಂದಿಗೆ ರಾಜ್ಯ ಸರ್ಕಾರ ಮತ್ತು ಸಚಿವರ ವಿರುದ್ದ ಕಿಡಿಕಾರಿದರು.