This is the title of the web page
This is the title of the web page

Live Stream

[ytplayer id=’1198′]

October 2025
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಶಿಕ್ಷಣ ಸಚಿವ ಸುರೇಶ್ ಕುಮಾರ್ ಆನ್ ಲೈನ್ ಮೀಟಿಂಗ್ – ರಾಜ್ಯದ ಅಧಿಕಾರಿಗಳೊಂದಿಗೆ ‘SSLC’ ಪರೀಕ್ಷೆ ಕುರಿತು ಚರ್ಚೆ…..

WhatsApp Group Join Now
Telegram Group Join Now

ಬೆಂಗಳೂರು –

SSLC ಪರೀಕ್ಷೆ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ರಾಜ್ಯದ ಶಿಕ್ಷಣ ಇಲಾಖೆ ಅಧಿಕಾರಿಗ ಳೊಂದಿಗೆ ಸಭೆ ಮಾಡಿದರು.ರಾಜ್ಯದ ಎಲ್ಲಾ ಜಿಲ್ಲೆ ಗಳ DDPI ಗಳೊಂದಿಗೆ ಸಭೆ ಮಾಡಿ ಪರೀಕ್ಷೆ ಕುರಿತು ಚರ್ಚೆ ಚಿಂತನ ಮಂಥನ ನಡೆಸಿದರು. ಮುಂದಿನ ವ್ಯಾಸಂಗಕ್ಕಾಗಿ ತಮ್ಮ ಸಾಮರ್ಥ್ಯವನ್ನು ಗುರುತಿಸಿಕೊಳ್ಳುವ ಅವಕಾಶ ದೊರಕಿಸಿಕೊಡಬೇ ಕೆನ್ನುವ ಮಹತ್ವದ ದೃಷ್ಟಿಯಿಂದ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ ಕುರಿತು ಮಕ್ಕಳು ಮತ್ತು ಪೋಷಕರಲ್ಲಿ ಆತ್ಮವಿಶ್ವಾಸ ಮೂಡಿಸುವ ಕ್ರಮಗಳ ನ್ನು ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು  ಪ್ರೌಢಶಿ ಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಕುರಿತು ರಾಜ್ಯದ ಎಲ್ಲ 34 ಶೈಕ್ಷಣಿಕ ಜಿಲ್ಲೆಗಳ ಉಪನಿರ್ದೇಶಕರು, ಬಿಇಒ ಮತ್ತು ಇಲಾಖೆಯ ಹಿರಿಯ ಅಧಿಕಾರಿಗ ಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಮಾರ್ಗದರ್ಶನ ನೀಡಿ ಈ ಬಾರಿಯ ಬದಲಾಗಿರುವ ಪರೀಕ್ಷೆ ಪದ್ಧತಿಯಲ್ಲಿ ಕುರಿತು ಮಕ್ಕಳಿಗೆ ಶಿಕ್ಷಕರು ಸೂಕ್ತ ತಿಳಿವಳಿಕೆ ನೀಡಲು ಕ್ರಮ ವಹಿಸಬೇಕೆಂದ ರು. ಎಲ್ಲದಕ್ಕಿಂತ ಮುಖ್ಯವಾಗಿ ಈ ಪರೀಕ್ಷೆಗಳನ್ನು ಕೋವಿಡ್-19 ಸೋಂಕು ತಹಬಂದಿಗೆ ಬಂದ ನಂತರವೇ ನಡೆಸಲಾಗುವುದು ಎಂಬ ಭರವಸೆಯ ನ್ನು ಮಕ್ಕಳು ಮತ್ತು ಪೋಷಕರಲ್ಲಿ ಮೂಡಿಸಬೇಕು ಎಂದು ಸಚಿವರು ಹೇಳಿದರು.ಈ ವಾರಂತ್ಯಕ್ಕೆ ಮಾದರಿ ಪ್ರಶ್ನೆ ಪತ್ರಿಕೆಗಳು ಎಲ್ಲ ಶಾಲೆಗಳಿಗೆ ಆಯಾ ಬಿಇಒ ಕಚೇರಿಗಳ ಮೂಲಕ ತಲುಪಲಿವೆ.ಮಕ್ಕಳಿಗೆ ಓಎಂಆರ್ ಶೀಟ್ ರೂಪದಲ್ಲಿರುವ ಪ್ರಶ್ನೆ ಪತ್ರಿಕೆಗ ಳಿಗೆ ಹೇಗೆ ಉತ್ತರಿಸಬೇಕೆಂಬ ಕುರಿತು ಶಿಕ್ಷಕರು ಸಲಹೆ ನೀಡಬೇಕು.ಈಗಾಗಲೇ ಹಲವಾರು ಜಿಲ್ಲೆಗಳ ಲ್ಲಿ ಅಧಿಕಾರಿಗಳು ಮತ್ತು ಶಿಕ್ಷಕರು ವಿವಿಧ ರೀತಿಯ ಲ್ಲಿ ಮಕ್ಕಳನ್ನು ತಲುಪಿ ಪರೀಕ್ಷೆ ಕುರಿತು ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಿ ಪರೀಕ್ಷೆಗೆ ಸಜ್ಜುಗೊಳಿಸುವ ಕೆಲಸ ಮಾಡುತ್ತಿದ್ದಾರೆ.ಇಂತಹ ಉಪಯುಕ್ತ ಮತ್ತು ಉತ್ತಮ ನಡೆಯನ್ನು ಉಳಿದ ಜಿಲ್ಲೆಗಳು ಅನುಸರಿಸ ಬೇಕೆಂದು  ಸುರೇಶ್ ಕುಮಾರ್ ಹೇಳಿದರು.

ಪರೀಕ್ಷೆಯ ಸಂಪೂರ್ಣ ಯಶಸ್ಸಿಗೆ ಕಳೆದ ಬಾರಿಯಂ ತೆ ಈ ವರ್ಷವೂ ಅಧಿಕಾರಿಗಳು ಎಲ್ಲ ರೀತಿಯ ಕ್ರಮ ಗಳನ್ನು ಕೈಗೊಂಡು ಹೆಚ್ಚಿನ ಸಹಕಾರ ನೀಡಬೇಕೆಂ ದು ಸಚಿವರು ಕೋರಿದರು.ಹಲವಾರು ಸ್ತರದ ಜನರೊಂದಿಗೆ ಹಲವಾರು ಸುತ್ತಿನ ಚರ್ಚೆಗಳ ನಂತರ ಮಕ್ಕಳ ಹಿತದೃಷ್ಟಿಯಿಂದ ಕೇವಲ ಎರಡು ದಿನಗಳ ಪರೀಕ್ಷೆ ನಡೆಸಲಾಗುತ್ತಿದೆ. ಕಳೆದ ಬಾರಿಗಿಂತ ಹೆಚ್ಚಿನ ಸುರಕ್ಷತಾ ವಾತಾವರಣದಲ್ಲಿ ಪರೀಕ್ಷೆಗಳು ನಡೆಯು ತ್ತಿದ್ದು, ಅದಕ್ಕಾಗಿ ಇಲಾಖೆ ಈಗಾಗಲೇ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.

ಮಕ್ಕಳ ಹಿತದೃಷ್ಟಿಯಿಂದ ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗು ತ್ತಿದ್ದು, ಕೋವಿಡ್-19ರ ಲಸಿಕೆ ಪಡೆದ ಶಿಕ್ಷಕರನ್ನೇ ಕೊಠಡಿ ಮೇಲ್ವಿಚಾರಕರನ್ನಾಗಿ ನೇಮಿಸಿಕೊಳ್ಳಬೇ ಕಾಗಿರುವುದರಿಂದ ಶಿಕ್ಷಕರಿಗೆ ಲಸಿಕೆ ನೀಡಲು ಕ್ರಮ ವಹಿಸುವಂತೆ ಈಗಾಗಲೇ ಆರೋಗ್ಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.ಈ ಬಗ್ಗೆ ಕಲಬುರಗಿ, ಧಾರವಾಡ ಅಪರ ಆಯುಕ್ತರು ವಿಶೇಷ ಗಮನ ಹರಿಸಿ ಲಸಿಕೆ ಪಡೆದ ಶಿಕ್ಷಕರನ್ನೇ ಮೇಲ್ವಿಚಾರಕರ ನ್ನಾಗಿ‌ ನೇಮಿಸಬೇಕೆಂದು ಸುರೇಶ್ ಕುಮಾರ್ ಸೂಚಿಸಿದರು.

ಕಳೆದ ಬಾರಿಗಿಂತ ಈ ಬಾರಿ 30 ಸಾವಿರ ಮಕ್ಕಳು ಹೆಚ್ಚಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ನೊಂದಾ ಯಿಸಿ ಕೊಂಡಿದ್ದಾರೆ. ಪರೀಕ್ಷೆ ಯಶಸ್ಸಿಗಾಗಿ ಕಳೆದ ಬಾರಿಯಂತೆ ಎಲ್ಲ ಇಲಾಖೆಗಳೂ ಸಹಕಾರ ನೀಡ ಲಿವೆ. ಈ ಕುರಿತಂತೆ ವಾರದೊಳಗೆ ವಿವಿಧ ಇಲಾಖೆ ಗಳ ಪ್ರಧಾನ ಕಾರ್ಯದರ್ಶಿಗಳು ಮತ್ತು ಆಯುಕ್ತ ರು,ನಿರ್ದೇಶಕರ ಸಭೆ ನಡೆಸಲಾಗುವುದು ಹಾಗೆಯೇ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾ ಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.

ಪರೀಕ್ಷೆಗೆ ಹಾಜರಾಗಲಿರುವ ಎಲ್ಲ ಮಕ್ಕಳಿಗೂ ಎನ್-95 ಮಾಸ್ಕ್ ಗಳನ್ನು ಒದಗಿಸಲು ಕ್ರಮ ವಹಿಸಲಾಗುತ್ತದೆ.ಮಕ್ಕಳ  ಹಿತದೃಷ್ಟಿಯಿಂದಲೇ ನಡೆಯುತ್ತಿರುವ ಈ ಪರೀಕ್ಷೆಯನ್ನು ಯಶಸ್ವಿಗೊಳಿ ಸಲು ಅಧಿಕಾರಿಗಳು ಹೆಚ್ಚಿನ ಶ್ರಮ ವಹಿಸಬೇಕು. ಪರೀಕ್ಷೆಯೊಳಗೆ ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಪರೀಕ್ಷಾ ಸಿದ್ಧತೆ ಪರಿಶೀಲಿಸಲು ಖುದ್ದಾಗಿ ಭೇಟಿ ನೀಡುವ ಕುರಿತು ಚಿಂತನೆ ನಡೆಸಿದ್ದೇನೆ ಎಂದರು

ಪರೀಕ್ಷೆ ಕುರಿತಂತೆ  ಮಕ್ಕಳು ಮತ್ತು  ಪೋಷಕರಲ್ಲಿ  ಸದಭಿಪ್ರಾಯವಿದ್ದು,  ಪರೀಕ್ಷೆ ಬರೆಯುವ ಕುರಿತು ಮಕ್ಕಳು ಆತ್ಮಸ್ಥೈರ್ಯದಿಂದ ಇದ್ದಾರೆ ಎಂದು ಡಿಡಿಪಿಐಗಳು ಸಚಿವರೊಂದಿಗೆ ಅನಿಸಿಕೆಗಳನ್ನು ಹಂಚಿಕೊಂಡರು. ತಮ್ಮ ತಮ್ಮ ಜಿಲ್ಲೆಗಳಲ್ಲಿ ಪರೀಕ್ಷೆ ಕುರಿತು ಕೈಗೊಳ್ಳಲಾಗಿರುವ ಮತ್ತು ಮಕ್ಕಳಿಗೆ ಹೊಸ ಪರೀಕ್ಷಾ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವ ಕುರಿತು ಮಾರ್ಗದರ್ಶನ ನೀಡಲು ಶಾಲಾ ಹಂತದಲ್ಲಿ ಮತ್ತು ತಾಲೂಕು ಮಟ್ಟದಲ್ಲಿ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು. ತಾವು ಈಗಾಗಲೇ ಡಿಸಿ ಮತ್ತು ಸಿಇಒ ಗಳನ್ನು ಭೇಟಿ ಮಾಡಿದ್ದು ಅವರೆಲ್ಲ ಪರೀಕ್ಷೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿ ದ್ದಾರೆಂದು  ಡಿಡಿಪಿಐ ಗಳು ಸಚಿವರ ಗಮನಕ್ಕೆ ತಗೆದುಕೊಂಡು ಬಂದರು

ಜಿಲ್ಲಾ ಶೈಕ್ಷಣಿಕ ಉಪನಿರ್ದೇಶಕರು ತಮ್ಮ ಜಿಲ್ಲೆ ಯಲ್ಲಿ ಪರೀಕ್ಷೆಗಳನ್ನು ಯಶಸ್ವಿಗೊಳಿಸುವ ಸಂಬಂಧ ದಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದು ಅವರಿಂದ ಎಲ್ಲ ರೀತಿಯ ಸಹಕಾ ರ ಪಡೆಯಬೇಕೆಂದು ಸೂಚನೆ ನೀಡಿದರು. ಸಭೆಯ ಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ. ಅನ್ಬುಕುಮಾರ್, ಅಪರ ಆಯುಕ್ತ ರಾದ ನಳಿನ್ ಅತುಲ್ (ಕಲಬುರಗಿ) ಮೇಜರ್ ಸಿದ್ದಲಿಂಗಯ್ಯ ಹಿರೇಮಠ (ಧಾರವಾಡ), ಇಲಾಖೆ ಯ ನಿರ್ದೇಶಕರು ಭಾಗವಹಿಸಿದ್ದರು.


Google News

 

 

WhatsApp Group Join Now
Telegram Group Join Now
Suddi Sante Desk