ಹುಬ್ಬಳ್ಳಿ –
ತೈಲ ಬೆಲೆ ಏರಿಕೆಯನ್ನು ಖಂಡಿಸಿ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪಕ್ಷದವರು ಪ್ರತಿಭಟನೆ ಮಾಡಿದರು.ಹೌದು ನಗರದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರಿಂದ ವಿಭಿನ್ನ ಪ್ರತಿಭ ಟನೆ ನಡೆಯಿತು.

ಹೌದು ಬುಲೆಟ್ ಬೈಕ್ ಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ಪ್ರತಿಭಟನೆ ಮಾಡಿದರು.ಬೈಕ್ ಗೆ ಹಗ್ಗ ಕಟ್ಟಿ ಎಳೆದು ಚಕ್ಕಡಿ ಓಡಿಸುವ ಮೂಲಕ ಪ್ರತಿಭಟಿ ಸಿದರು ಕಾರ್ಯಕರ್ತರು ನಾಯಕರು ಮಾಜಿ ಸಚಿವ ಎ.ಎಂ ಹಿಂಡಸಗೇರಿ, ಶಾಸಕ ಪ್ರಸಾದ ಅಬ್ಬಯ್ಯ ನೇತೃತ್ವದಲ್ಲಿ ಈ ಒಂದು ಪ್ರತಿಭಟನೆ ನಡೆಯಿತು

ನಗರದ ಚೆನ್ನಮ್ಮ ವೃತ್ತ ಹಾಗೂ ಬಂಕಾಪುರ ಚೌಕ್ ನಲ್ಲಿ ಪ್ರತಿಭಟನೆ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು
ಚೆನ್ನಮ್ಮ ವೃತ್ತದಲ್ಲಿರುವ ಪೆಟ್ರೋಲ್ ಬಂಕ್ ಎದುರು ಬಾಯಿ ಬಾಯಿ ಬಡಿದುಕೊಳ್ಳುವ ಮೂಲಕ ಪ್ರತಿಭಟನೆ ಮಾಡಿದರು



ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು
ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸಬೇಕು ಎಂದು ಒತ್ತಾಯವನ್ನು ಮಾಡಿದರು ತೈಲ ಬೆಲೆ ಇಳಿಕೆ ಮಾಡದಿದ್ದಲ್ಲಿ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿ ದರು.ಇನ್ನೂ ಈ ಒಂದು ಪ್ರತಿಭಟನೆಯಲ್ಲಿ ಶಾಸಕ ರೊಂದಿಗೆ ಪಕ್ಷದ ನಾಯಕರು ಮುಖಂಡರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು