ಬೆಂಗಳೂರು –
ವಿದ್ಯಾರ್ಥಿಗಳು ಶಾಲಾ ಶುಲ್ಕ ಪಾವತಿಸಿಲ್ಲ ಎಂದು ವಿದ್ಯಾರ್ಥಿಗಳಿಗೆ ಆನ್‌ಲೈನ್ ಕ್ಲಾಸ್ ಬಂದ್ ಮಾಡು ವಂತಿಲ್ಲ ಮಾಡಿದ್ದು ಕಂಡು ಬಂದರೆ ದೂರು ಬಂದರೆ ಅಂತಹ ಶಾಲೆಗಳ ವಿರುದ್ದ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಯಾವುದೇ ಶಾಲೆಗಳು ವಿದ್ಯಾರ್ಥಿ ಗಳು ಶಾಲಾ ಶುಲ್ಕ ಪಾವತಿ ಮಾಡಿಲ್ಲ ಎಂದು ಆನ್ ಲೈನ್ ಕ್ಲಾಸ್ ಬಂದ್ ಮಾಡುವಂತಿಲ್ಲ.ಒಂದು ವೇಳೆ ಬಂದ್ ಮಾಡಿದ ಬಗ್ಗೆ ದೂರು ದಾಖಲಾದಲ್ಲಿ ಅಂತಹ ಶಾಲೆಗಳ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದರು
ಬಂದ್ ಮಾಡುವಂತ ಶಾಲೆಗಳ ವಿರುದ್ದ ಕ್ರಮವನ್ನು ಕೈಗೊಳ್ಳಲು ಸಿಎಂ ಅಲ್ಲದೇ ಹೈಕೋರ್ಟ್,ಸುಪ್ರೀಂ ಕೋರ್ಟ್‌ನ ಸೂಚನೆ ಕೂಡಾ ಇದೆ ಎಂದರು.ಶಾಲಾ ಶುಲ್ಕ ಕಟ್ಟಿಲ್ಲವೆಂದು ಆನ್‌ಲೈನ್ ಕ್ಲಾಸ್ ಬಂದ್ ಮಾಡಿರುವ ವಿಚಾರದ ಬಗ್ಗೆ ಪೋಷಕರು ಕೂಡಾ ದೂರು ಸಲ್ಲಿಸಬಹುದು.ನನಗೆ ಅಥವಾ ಶಾಲಾ ವ್ಯಾಪ್ತಿಯ ಬಿಇಓಗಳಿಗೆ ದೂರು ನೀಡಿದ್ದಲ್ಲಿ ಅಂತಹ ಶಾಲೆಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗು ತ್ತದೆ ಎಂದರು
“