ಬೆಂಗಳೂರು –
ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು ಬನ್ನೇರು ಘಟ್ಟ ರಸ್ತೆಯಲ್ಲಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದಾರೆ.ಮೆದುಳಿನ ಬಲಭಾಗ ದಲ್ಲಿ ತೀವ್ರ ಗಾಯವಾದ ಹಿನ್ನೆಲೆಯಲ್ಲಿ ಮೆದುಳಿನ ಶಸ್ತ್ರ ಚಿಕಿತ್ಸೆ ಮಾಡಿ ಐಸಿಯುನಲ್ಲಿ ಇರಿಸಲಾಗಿದೆ.
ರಾತ್ರಿ ವೇಳೆ ಅಪಘಾತ ಸಂಭವಿಸಿದ್ದರಿಂದ ಹತ್ತಿರ ದಲ್ಲಿದ್ದ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳಿನ ಜತೆಗೆ ತೊಡೆ ಭಾಗಕ್ಕೂ ತೀವ್ರ ತರಹದ ಗಾಯಗಳಾಗಿವೆ.ಶಸ್ತ್ರ ಚಿಕಿತ್ಸೆ ಮಾಡಿದ ಹಿನ್ನೆಲೆ ಯಲ್ಲಿ ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ.ಬೈಕ್ ನಲ್ಲಿ ಸ್ನೇಹಿತರೊಂದಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದ್ದು ಬಲಗಾಲಿನ ತೊಡೆಯ ಮೂಳೆ ಮುರಿದಿದೆ. ಮೆದುಳಿನ ಭಾಗದಲ್ಲಿ ತೀವ್ರ ರಕ್ತಸ್ತ್ರಾವವಾಗಿದೆ. ಹಾಗಾಗಿ ಶಸ್ತ್ರ ಚಿಕಿತ್ಸೆ ಮಾಡಿ ಐಸಿಯುನಲ್ಲಿ ಇರಿಸಲಾಗಿದೆ.ಮುಂದಿನ 48 ಗಂಟೆ ಏನೂ ಹೇಳಲು ಸಾಧ್ಯವಿಲ್ಲ ಎಂದು ನ್ಯೂರೋ ಸರ್ಜನ್ ಅರುಣ್ ನಾಯಕ್ ತಿಳಿಸಿದ್ದಾರೆ.