ಬೆಂಗಳೂರು –
ಮಹಾಮಾರಿ ಕೊರೋನಾ ಆರ್ಥಿಕ ಸಂಕಷ್ಟದ ನಡುವೆಯೂ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ನೌಕರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿನ ಶುಲ್ಕದ ಮೇಲಿನ ಬಡ್ಡಿದರವನ್ನು ವಾರ್ಷಿಕ ಶೇ.7.1ಕ್ಕೆ ನಿಗದಿ ಮಾಡಿದೆ
ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನೇತ್ರಪ್ರಭಾ ಎಂ ಧಾಯ ಪುಲೆ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆದಾರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಜಮೆಯಾಗಿ ರುವ ಶಿಲ್ಕಿನ ಮೇಲಿನ ಬಡ್ಡಿದರವನ್ನು ದಿನಾಂಕ 01-04-2021 ರಿಂದ ದಿನಾಂಕ 30-06-2021 ರವರೆಗಿನ ಅವಧಿಗೆ ವಾರ್ಷಿಕ ಶೇ.7.1ಕ್ಕೆ ನಿಗದಿಪ ಡಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.