ಚಿಕ್ಕಬಳ್ಳಾಪುರ –
ಹೊರಗೆ ಹೋಗಿ ಬರುವುದಾಗಿ ಪತ್ನಿಗೆ ಹೇಳಿ ಹೋಗಿದ್ದ ಶಿಕ್ಷಕ ಶವವಾಗಿ ಪತ್ತೆ.ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿರುವ ದುಷ್ಕರ್ಮಿಗಳು
ಮನೆಯಿಂದ ಕಾಣೆಯಾಗಿದ್ದ ಸರ್ಕಾರಿ ಶಾಲೆಯ ಶಿಕ್ಷಕನೋರ್ವ ನಿರ್ಜನ ಪ್ರದೇಶದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚಿಕ್ಕಬಳ್ಳಾಪುರ ದಲ್ಲಿ ನಡೆದಿದೆ. ಜಿಲ್ಲೆಯ ಗೌರಿಬಿದನೂರು ನಗರದ ಹೊರವಲಯದ ಬೈಪಾಸ್ ರಸ್ತೆ ಬಳಿ ಈ ಒಂದು ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಬೊಮ್ಮನಹಳ್ಳಿ ಸರ್ಕಾರಿ ಶಾಲೆ ಯ ಶಿಕ್ಷಕ 42 ವರ್ಷದ ವಿಶ್ವನಾಥ ಎಂಬುವರಾಗಿ ದ್ದಾರೆ.ಕಳೆದ ರಾತ್ರಿ ದ್ವಿಚಕ್ರ ವಾಹನವನ್ನು ಹೊರಗೆ ನಿಲ್ಲಿಸುವುದಾಗಿ ಹೆಂಡತಿಗೆ ಹೇಳಿ ಹೋಗಿದ್ದ ವಿಶ್ವನಾಥ್ ತದ ನಂತರ ಮನೆಗೆ ಹಿಂತಿರುಗಲಿಲ್ಲ ವಂತೆ. ಅವರಿಗಾಗಿ ರಾತ್ರಿಯೆಲ್ಲಾ ಶೋಧ ನಡೆಸಿ ಇಂದು ಮುಂಜಾನೆ ಗೌರಿಬಿದನೂರು ಪುರ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದಾರೆ.ಈ ಕುರಿತಾಗಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾಣೆಯಾದ ವ್ಯಕ್ತಿಯ ಹುಡಕಾಟದಲ್ಲಿ ನಿರತರಾಗಿದ್ದರು. ಆದರೆ ಸಾರ್ವಜನಿಕರೊಬ್ಬರು ಪಿಎಸ್ಐ ಪ್ರಸನ್ನ ಕುಮಾರ್ ಗೆ ಫೋನ್ ಮಾಡಿ ಬೈಪಾಸ್ ರಸ್ತೆಯ ನರ್ಸಿಂಗ್ ಕಾಲೇಜು ಮುಂಭಾಗದ ನಿರ್ಜನ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಕೊಲೆಯಾಗಿ ದ್ದಾನೆ ಎಂದು ಮಾಹಿತಿ ನೀಡಿದ್ದಾರೆ.ತಕ್ಷಣ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದಾಗ ಕಾಣೆಯಾದ ಶಿಕ್ಷಕ ವಿಶ್ವನಾಥ್ ಎಂದು ದೃಢಪಟ್ಟಿದೆ. ಮೃತ ವ್ಯಕ್ತಿಯ ದೇಹವು ಅರೆನಗ್ನಾವಸ್ಥೆಯಲ್ಲಿ ಪತ್ತೆಯಾಗಿದ್ದು ಎರಡೂ ಕಾಲುಗಳನ್ನು ಜೀನ್ಸ್ ಪ್ಯಾಂಟ್ ಮೂಲಕ ಕಟ್ಟಿಹಾಕಿ ಕೊಲೆ ಮಾಡಲಾಗಿದೆ.
ಮೃತದೇಹದ ಸಮೀಪವೇ ಆತನ ದ್ವಿಚಕ್ರವಾಹನ ಪತ್ತೆಯಾಗಿದೆ.ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಅತ್ತ ಗೌರಿಬಿದನೂರು ಪೊಲೀ ಸರು ಆರೋಪಿಗಳ ಪತ್ತೆಗೆ ಬಲೆ ಬೀಸಿ ತನಿಖೆ ಚುರುಕುಗೊಳಿಸಿದ್ದಾರೆ.