ನವದೆಹಲಿ –
ಕೇಂದ್ರದ ಶಿಕ್ಷಣ ಸಚಿವರಾಗಿ ಧರ್ಮೇಂದ್ರ ಪ್ರಧಾನ್ ಅಧಿಕಾರ ವಹಿಸಿಕೊಂಡಿದ್ದಾರೆ.ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದಿಂದ ಹೊರಗುಳಿದಿದ್ದ ಮಾಜಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಪಾಲಿಗೆ ಮತ್ತೊಮ್ಮೆ ಕೇಂದ್ರ ಸಚಿವ ಸ್ಥಾನ ಒಲಿದು ಬಂದಿದೆ.
ಈ ಹಿಂದೆ ಕೇಂದ್ರದಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮತ್ತು ಉಕ್ಕಿನ ಖಾತೆ ನಿರ್ವಹಿಸಿದ ಧರ್ಮೇಂದ್ರ ಪ್ರಧಾನ್ ರಿಗೆ ಈ ಬಾರಿ ಶಿಕ್ಷಣ ಖಾತೆಯನ್ನು ನೀಡಲಾಗಿದೆ. ಶಿಕ್ಷಣ ಸಚಿವಾಲಯದ ಜೊತೆಗೆ ಕೌಶಲ್ಯ ಅಭಿವೃದ್ಧಿ ಸಚಿವಾಲಯವನ್ನು ಸೇರಿಸಲಾಗಿದೆ. ಭವಿಷ್ಯದಲ್ಲಿ ಈ ಎರಡು ಸಚಿವಾಲ ಯಗಳು ಒಟ್ಟಾಗಿ ಕಾರ್ಯ ನಿರ್ವಹಿಸಲಿದ್ದು ಎರಡು ಸಚಿವಾಲಯದ ಹೊಣೆಯನ್ನು ಧರ್ಮೇಂದ್ರ ಪ್ರಧಾನ್ ರಿಗೆ ವಹಿಸಲಾಗಿದೆ.