ಬೆಂಗಳೂರು –
ಡಿ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಮತ್ತೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಈ ಒಂದು ಪ್ರಕರಣದಲ್ಲಿ ಮತ್ತೊಬ್ಬ ಜನ ಪ್ರತಿನಿಧಿಯರನ್ನು ಪೊಲೀಸರು ಬಂಧಿಸಿದ್ದಾರೆ. ಮಾಜಿ ಕಾರ್ಪೋರೇಟರ್ ಜಾಕೀರ್ ಬಂಧಿತರಾಗಿದ್ದಾರೆ. ಬುಧವಾರ ರಾತ್ರಿ ಖಚಿತ ಮಾಹಿತಿ ಮೇರೆಗೆ ಇವರನ್ನು ಪೊಲೀಸರು ಬಂಧಿಸಿದ್ದು, ಇಂದು ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಪೊಲೀಸರು ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆಯಲಿದ್ದಾರೆ.

ಡಿ.ಜೆ. ಹಳ್ಳಿ ಗಲೆಭೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಮಾಜಿ ಕಾರ್ಪೋರೇಟರ್‌ಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟಿಸ್ ನೀಡಲಾಗಿತ್ತು. ವಿಚಾರಣೆ ಎದುರಿಸದೇ ತಲೆ ಮರೆಸಿಕೊಂಡಿದ್ದರು.ಮಾಜಿ ಮೇಯರ್ ಸಂಪತ್ ರಾಜ್ ಮತ್ತು ಮಾಜಿ ಕಾರ್ಪೋರೇಟರ್ ಅಬ್ದುಲ್ ರಕೀಬ್ ಜಾಕೀರ್ ಅವರ ಪಾತ್ರ ಇರುವ ಬಗ್ಗೆ ಸಿಸಿಬಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು ಇದರಿಂದ ಬಂಧನಕ್ಕೇ ಜಾಲ ಬೀಸಿರುವ ಸಿಸಿಬಿ ಪೊಲೀಸರಿಗೆ ಕೊನೆಗೂ ಜಾಕೀರ್ ಬಲೆಗೆ ಬಿದ್ದಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡುತ್ತಿದ್ದಂತೆ ಇಬ್ಬರೂ ತಲೆ ಮರೆಸಿಕೊಂಡಿದ್ದರು.ಬಂಧನಕ್ಕೇ ಸಿಸಿಬಿ ಪೊಲೀಸರು ಬಿಡುವಿಲ್ಲದ ಕಾರ್ಯಾಚರಣೆ ಮಾಡುತ್ತಿದ್ದರು ಇವೆಲ್ಲದರ ನಡುವೆ ನಿನ್ನೇ ರಾತ್ರಿ ಜಾಕೀರ್ ಇರುವ ಮಾಹಿತಿ ತಿಳಿದ ಪೊಲೀಸರು ಆರೋಪಿಯನ್ನು ಬಂಧಿಸಿ ವಶಕ್ಕೇ ತಗೆದುಕೊಂಡು ವಿಚಾರಣೆ ಮಾಡ್ತಾ ಇದ್ದಾರೆ.