ಬಾಗಲಕೋಟೆ –
SSLC ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪೂರ ಪಟ್ಟಣದಲ್ಲಿ ನಡೆದಿದೆ.ಸ್ನೇಹಾ (16) ಮೃತ ವಿದ್ಯಾರ್ಥಿನಿ ಯಾಗಿದ್ದಾರೆ.ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುವುದು ದೃಢಪಟ್ಟ ಹಿನ್ನೆಲೆಯಲ್ಲಿ ಚೆನ್ನಾಗಿ ಓದಿ ಪರೀಕ್ಷೆ ಮಾಡು ಅಂತ ಪೋಷಕರು ಸೂಚಿಸಿದ್ದರು. ಇದರಿಂದ ಹೆದರಿದ ವಿದ್ಯಾರ್ಥಿನಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ.
ಇನ್ನೂ ಸುದ್ದಿ ತಿಳಿದ ಮಹಾಲಿಂಗಪೂರ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಮಹಾಲಿಂಗಪೂರ ಠಾಣಾಧಿಕಾರಿ ಎಸ್.ಎಸ್. ಘಾಟಗೆ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ