ಬೆಂಗಳೂರು –
ಬಹುತೇಕ ಪ್ರಮಾಣದಲ್ಲಿ ಎಲ್ಲವನ್ನೂ ಘೋಷಣೆ ಮಾಡಿ ಇನ್ನೇನು ಮಹೂರ್ತ ಘೋಷಣೆಯೊಂದೇ ಅಷ್ಟೇ ಬಾಕಿ ಇತ್ತು ಹೀಗಿರುವಾಗ ಜಿಲ್ಲಾ ಮತ್ತು ತಾಲೂಕು ಪಂಚಾಯತ ಚುನಾವಣೆಗೆ ದೊಡ್ಡ ದೊಂದು ಶಾಕಿಂಗ್ ಸುದ್ದಿಯನ್ನು ರಾಜ್ಯ ಸರ್ಕಾರ ನೀಡಿದೆ.ಹೌದು ಮೀಸಲಾತಿಯನ್ನು ಪ್ರಕಟಗೊಳಿಸಿ ಲಿಸಿದ್ದು ಇನ್ನೇನು ಚುನಾವಣೆಯ ದಿನಾಂಕ ಕೂಡ ಸದ್ಯದಲ್ಲೇ ಘೋಷಣೆ ಕೂಡ ಆಗಲಿದೆ ಎಂದೇ ನಿರೀಕ್ಷೆಸಲಾಗಿತ್ತು. ಆದ್ರೇ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರವು ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಯನ್ನು ಡಿಸೆಂಬರ್ ವರೆಗೆ ಮುಂದೂಡಲು ನಿರ್ಣಯವನ್ನು ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿದೆ. ಈ ಮೂಲಕ ಜಿಲ್ಲಾ, ತಾಲೂಕು ಪಂಚಾಯ್ತಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ ಆಗಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವ ದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ 2021ರ ಡಿಸೆಂಬರ್ ವರೆಗೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸದಿರಲು ನಿರ್ಧರಿಸಿದೆ.ಚುನಾವಣೆಯ ಬಗ್ಗೆ ಈಗ ಡಿಸೆಂಬರ್ ನಂತರ ನಿರ್ಧಾರವನ್ನು ಮತ್ತೆ ತೆಗೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.