ಧಾರವಾಡ –

ನಾಳೆ SSLC ಪರೀಕ್ಷೆ ನಡೆಯಲಿದೆ ಇನ್ನೂ ಧಾರವಾಡದಲ್ಲಿನ ಪರೀಕ್ಷಾ ಕೇಂದ್ರ ಗಳಿಗೆ ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾದ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು

ನಾಳೆಯ ಎಸ್ ಎಸ್ ಎಲ್ ಸಿ ಪರೀಕ್ಷೆ ಸಿದ್ದತೆಯ ಕುರಿತು ಪರಿಶೀಲನೆ ನಡೆಸಿದರು.ನಗರದಲ್ಲಿನ ಹಲವು ಪರೀಕ್ಷಾ ಕೇಂದ್ರ ಗಳಿಗೆ ಭೇಟಿ ನೀಡಿ ಸಿದ್ದತೆ ಕುರಿತು ಪರಿಶೀಲನೆ ಮಾಡಿದರು

SSLC ಪರೀಕ್ಷೆಗಳಿಗಾಗಿ ಸಿದ್ಧಪಡಿಸಿದ ವ್ಯವಸ್ಥೆಯ ಕುರಿತು ನೋಡಿ ಮಾಹಿತಿಯನ್ನು ಪಡೆದುಕೊಂಡರು ಐದಾರು ಪರೀಕ್ಷಾ ಕೇಂದ್ರಗಳ ಪರಿಶೀಲನೆ ಮಾಡಿ ದರು.ಇವರೊಂದಿಗೆ ಧಾರವಾಡ ಜಿಲ್ಲೆಯ ಉಪ ನಿರ್ದೇಶಕರಾದ ಮೋಹನ ಕುಮಾರ್ ಹಂಚಾಟೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಿರೀಶ್ ಪದಕಿ, ಉಮೇಶ್ ಬೊಮ್ಮಕ್ಕನವರ,ಹಾಗೇ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಪರೀಕ್ಷಾ ಕಾರ್ಯಗಳಲ್ಲಿ ಉತ್ಸಾಹದಿಂದ ಭಾಗಿಯಾಗಿದ್ದರು. ಇವರೊಂದಿಗೆ ಹಲವು ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು