ಹುಬ್ಬಳ್ಳಿ –
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಾವಲು ವಾಹನಕ್ಕೆ ಕಾರೊಂದು ಡಿಕ್ಕಿಯಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರ ಬಸವರಾಜ ಬೊಮ್ಮಾಯಿಯವರು ಇಂದು ಉತ್ತರ ಕನ್ನಡ ಪ್ರವಾಸ ಕೈಗೊಂಡಿದ್ದಾರೆ.ಅಲ್ಲಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯಾಗಿರುವ ಮನೆ, ಆಸ್ತಿಪಾಸ್ತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಹೊರಟಿದ್ದ ಸಮಯದಲ್ಲಿ ಈ ಒಂದು ಅಪಘಾತ ಸಂಭವಿಸಿದೆ
ಹುಬ್ಬಳ್ಳಿಯಿಂದ ಎಲ್ಲಾ ಕೆಲಸ ಕಾರ್ಯ ಮುಗಿಸಿ ಕೊಂಡು ಕಾರವಾರದ ಜಿಲ್ಲೆಯ ಪ್ರವಾಸ ವೇಳೆ ಉತ್ತರ ಕನ್ನಡ ಜಿಲ್ಲೆಯ ಶಾಸಕ, ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕೂಡ ಜೊತೆಯಾಗಿದ್ದರು. ಆದರೆ ಅವರು ಚಲಿಸುತ್ತಿದ್ದ ಕಾರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಬೆಂಗಾವಲು ವಾಹನಕ್ಕೆ ಹುಬ್ಬಳ್ಳಿಯಲ್ಲಿ ಡಿಕ್ಕಿ ಹೊಡೆದಿದೆ. ಮಾಜಿ ಸಚಿವ ಹೆಬ್ಬಾರ್ ಅವರಿಗೆ ಸಣ್ಣಪುಟ್ಟ ಗಾಯಗಳಾ ಗಿದ್ದು ದೊಡ್ಡ ದೊಂದು ಅವಘಡ ತಪ್ಪಿದಂತಾಗಿದೆ