ಬೆಂಗಳೂರು –
ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ಅವರಿಗೆ ನೂತನ ಮುಖ್ಯ ಮಂತ್ರಿ ಬಸವರಾಜ ಬೊಮ್ಮೊಯಿ ಸಚಿವ ಸಂಪುಟ ದಲ್ಲಿ ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ. ಈ ಒಂದು ಸಂಪುಟದಲ್ಲಿ ಅವರನ್ನು ಕೈಬಿಡಲಾಗಿದ್ದು ಸಚಿವ ಸ್ಥಾನ ಕೈತಪ್ಪುತ್ತಿದ್ದಂತೆ ಅತ್ತ ಸುರೇಶ್ ಕುಮಾರ್ ಅವರು ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದ ಗಳನ್ನು ಹೇಳಿದ್ದಾರೆ.
ಎರಡು ವರ್ಷಗಳ ಈ ಒಂದು ಸಮಯದಲ್ಲಿ ನನ್ನೊಂದಿಗೆ ಕೆಲಸ ಮಾಡಿದವರಿಗೆ ನನ್ನೊಂದಿಗೆ ಸಹಕರಿಸಿದ್ದಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳು ಎಂದು ಉಲ್ಲೇಖ ಮಾಡಿ ಫೇಸ್ ಬುಕ್ ನಲ್ಲಿ ಪೊಸ್ಟ್ ಮಾಡಿದ್ದಾರೆ.