ಬೆಂಗಳೂರು –
ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಅದೇ ಕುರ್ಚಿಯಲ್ಲಿ ಆಪ್ತನನ್ನು ಕೂಡಿಸಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮನ್ನು ಸಿಎಂ ಪಟ್ಟಕ್ಕೇರಿಸಿದ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆಯ ಸ್ಥಾನ ನೀಡಿ ಸಿಎಂ ಭರ್ಜರಿ ಗಿಫ್ಟ್ ನೀಡಿದ್ದಾರೆ.

ಹೌದು ಗುರುವಿಗೆ CM ಬಸವರಾಜ ಬೊಮ್ಮಾಯಿ ತಾವು ಅಧಿಕಾರ ಇರುವರೆಗೂ ಸಂಪುಟ ದರ್ಜೆಯ ಸೌಲಭ್ಯಗಳನ್ನು ನೀಡಿ ಆದೇಶ ಹೊರಡಿಸಿದ್ದಾರೆ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಾಜೇಶ ಶಂಕ್ರಪ್ಪ ಸೂಳಿಕೇರಿ ಅಧಿಸೂಚನೆ ಹೊರಡಿಸಿದ್ದಾರೆ.

ಬಿಎಸ್ ಯಡಿಯೂರಪ್ಪ ನಿಕಟಪೂರ್ ಮುಖ್ಯಮಂ ತ್ರಿಗಳು ಇವರಿಗೆ, ನೂತನವಾಗಿ ಪದಾರೋಹಣ ಮಾಡಿದ ಮುಖ್ಯಮಂತ್ರಿಗಳ ಪದವಿಯ ಅವಧಿ ಇರುವವರೆಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯವನ್ನು ನೀಡುವಂತೆ ಆದೇಶಿಸಿದ್ದಾರೆ.

ಖಾತೆ ಕಿತ್ತಾಟ ಆರಂಭವಾಗಿದ್ದು ಈ ಎಲ್ಲಾ ಬೆಳವಣಿಗೆ ನಡುವೆಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಿ ಭರ್ಜರಿ ಗಿಫ್ಟ್ ನೀಡಿದ್ದಾರೆ.
