ಬೆಂಗಳೂರು –
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರಿಗೆ ಸಂಪುಟ ದರ್ಜೆಯ ಸ್ಥಾನ ಮಾನವನ್ನು ನೀಡಿ ಸೌಲಭ್ಯಗಳನ್ನು ನೀಡುವಂತೆ ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಆದೇಶವನ್ನು ಮಾಡಿದ್ದರು ಈ ಒಂದು ಆದೇಶದ ಬೆನ್ನಲ್ಲೇ ತಮಗೆ ನೀಡಿರುವ ಸಂಪುಟ ದರ್ಜೆ ಸ್ಥಾನಮಾನವನ್ನು ಹಿಂಪಡೆಯ ಬೇಕೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಅವರು ಮುಖ್ಯಮಂತ್ರಿ ಬಿಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಬೊಮ್ಮಾಯಿ ಅವರಿಗೆ ಪತ್ರವನ್ನು ಬರೆದು ಸರ್ಕಾರದಿಂದ ನೀಡಿರುವ ಸೌಲಭ್ಯಗಳನ್ನು ಮಾತ್ರ ನೀಡಬೇಕು ಹೊರತು ಸಂಪುಟ ದರ್ಜೆಯ ಸ್ಥಾನಮಾನವನ್ನು ಹಿಂಪಡೆಯಬೇಕೆಂದು ಕೋರಿದ್ದಾರೆ.
ನಿನ್ನೆಯಷ್ಟೇ ಬೊಮ್ಮಾಯಿ ಅವರು ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಆದೇಶ ಹೊರಡಿಸಿದ್ದರು.ಇದು ರಾಜಕೀಯ ವಲಯ ದಲ್ಲಿ ತೀವ್ರ ವಿವಾದಕ್ಕೆ ಗುರಿಯಾಗಿತ್ತು.ಹೀಗಾಗಿ ಈ ಆದೇಶವನ್ನು ಹಿಂಪಡೆಯುವಂತೆ ಬಿಎಸ್ವೈ ಸರ್ಕಾ ರಕ್ಕೆ ಮನವಿ ಮಾಡಿದ್ದಾರೆ