ಕಾಮಗಾರಿಗಳಿಗೆ ಬಾಕಿ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ – ರಾಜ್ಯದ ಎಲ್ಲಾ ಇಲಾಖೆಯ ಕಾಮಗಾರಿಗಳಿಗೆ ಬಿಡುಗಡೆಯಾಯಿತು ಹಣ…..

Suddi Sante Desk
ಕಾಮಗಾರಿಗಳಿಗೆ ಬಾಕಿ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ – ರಾಜ್ಯದ ಎಲ್ಲಾ ಇಲಾಖೆಯ ಕಾಮಗಾರಿಗಳಿಗೆ ಬಿಡುಗಡೆಯಾಯಿತು ಹಣ…..

ಬೆಂಗಳೂರು

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣಕ ಕಾಮಗಾರಿಗಳಿಗೆ ಹಣ ಬಿಡುಗಡೆಯನ್ನು ತಡೆ ನೀಡಲಾಗಿತ್ತು ಇದೀಗ ಸರ್ಕಾರದ ಎಲ್ಲಾ ಇಲಾಖೆ,ನಿಗಮಗಳು, ಮಂಡಳಿ,ಪ್ರಾಧಿಕಾರಗಳ ಮುಂದುವರಿದ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿ ಆದೇಶಿಸಿದೆ.

ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಏಕ್ ರೂಪ್ ಕೌರ್ ಅವರು ಸುತ್ತೋಲೆ ಹೊರಡಿಸಿದ್ದಾರೆ.ಮುಂದುವರೆದ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವ ಸಂಬಂಧ ಉಲ್ಲೇಖಿತ ಸುತ್ತೋಲೆಗಳಲ್ಲಿ ನೀಡ ಲಾದ ನಿರ್ದೇಶನಗಳನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲಾ ಇಲಾಖೆಗಳು ಹಾಗೂ ಇಲಾಖೆಗಳ ಅಧೀನಕ್ಕೊಳಪಡುವ ನಿಗಮ,ಮಂಡಳಿ, ಪ್ರಾಧಿಕಾರಗಳ ಮುಂದುವರಿದ ಕಾಮಗಾರಿಗಳ ಸಮರ್ಪಕ ಅನುಷ್ಠಾನದ ಬಗ್ಗೆ ಪರಿಶೀಲಿಸಿ, ನಿಯಮಾನುಸಾರವಿರುವುದನ್ನು ಖಚಿತಪಡಿಸಿ ಕೊಂಡು ಹಿಂದಿನಂತೆಯೇ ಹಣ ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ.

ಹಿಂದಿನ ಸರ್ಕಾರದಿಂದ ಅನುಮೋದನೆಗೊಂಡು ಇನ್ನೂ ಪ್ರಾರಂಭವಾಗದಿರುವ ಕಾಮಗಾರಿಗಳ ಬಗ್ಗೆ ಸಂಬಂಧಪಟ್ಟ ಸಚಿವರ ಅನುಮೋದನೆ ಯೊಂದಿಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಆಡಳಿತ ಇಲಾಖೆಯ ಕಾರ್ಯದರ್ಶಿಗಳು ಕ್ರಮ ವಹಿಸಲು ತಿಳಿಸಿದೆ.

2023-24ರ ಆಯವ್ಯಯದಲ್ಲಿ ಜುಲೈ ಅವಕಾಶ ಮಾಡಿಕೊಂಡಿರುವ ಹೊಸ ಯೋಜನೆ ಕಾಮ ಗಾರಿಗಳ ಬಗ್ಗೆ ಆರ್ಥಿಕ ಇಲಾಖೆಯಿಂದ ನೀಡ ಲಾದ ಆಯವ್ಯಯ ಸಲಹಾ ಟಿಪ್ಪಣಿ ಹಾಗೂ ಅಧಿಕಾರ ಪ್ರತ್ಯಾಯೋಜನೆ ಆದೇಶ ಸಂಖ್ಯೆ: ಎಫ್‌ಡಿ 7 ಟಿಎಫ್‌ ಪಿ 2023ರ ಆದೇಶದಲ್ಲಿನ ಕ್ರಮಗಳನ್ನು ಅನುಸರಿಸಿ ಆಡಳಿತ ಇಲಾಖೆಯು ಹೊಸ ಯೋಜನೆ ಕಾಮಗಾರಿಗಳನ್ನು ಅನುಷ್ಠಾನ ಗೊಳಿಸಲು ಕ್ರಮ ವಹಿಸುವಂತೆ ತಿಳಿಸಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.