ಭೀಕರ ಅಪಘಾತ ಐವರು ಸ್ಥಳದಲ್ಲೇ ಸಾವು – ಸರ್ಕಾರಿ ಬಸ್ ಮತ್ತು ಟಾಟಾ ಸುಮೋ ನಡುವೆ ಅಪಘಾತ…..

Suddi Sante Desk
ಭೀಕರ ಅಪಘಾತ ಐವರು ಸ್ಥಳದಲ್ಲೇ ಸಾವು – ಸರ್ಕಾರಿ ಬಸ್ ಮತ್ತು ಟಾಟಾ ಸುಮೋ ನಡುವೆ ಅಪಘಾತ…..

ಗದಗ

ಭೀಕರ ಅಪಘಾತ ಐವರು ಸ್ಥಳದಲ್ಲೇ ಸಾವು – ಸರ್ಕಾರಿ ಬಸ್ ಮತ್ತು ಟಾಟಾ ಸುಮೋ ನಡುವೆ ಅಪಘಾತ ಸರ್ಕಾರಿ ಬಸ್ ಮತ್ತು ಟಾಟಾ ಸುಮೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಐವರು ಸಾವಿಗೀಡಾದ ಘಟನೆ ಗದಗ ನಲ್ಲಿ ನಡೆದಿದೆ.ಹೌದು ಕೆಎಸ್ಆರ್’ಟಿಸಿ ಬಸ್ ಹಾಗೂ ಟಾಟಾ ಸುಮೋ ವಾಹನ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮಹಿಳೆ ಯರು ಸೇರಿ ಐವರು ಸಾವಿಗೀಡಾಗಿದ್ದಾರೆ

ಈ ಒಂದು ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಿಡಗುಂದಿಕೊಪ್ಪ ಕ್ರಾಸ್ ಬಳಿ‌ ನಡೆದಿದೆ.ಮೃತರನ್ನು ಮಾದೇನ ಹಿಪ್ಪರಗಿ ನಿವಾಸಿಗಳಾದ ಶಿವಕುಮಾರ ಕಲಶೆಟ್ಟಿ(50), ಚಂದ್ರಕಲಾ ಕಲಶೆಟ್ಟಿ(42), ರಾಣಿ ಕಲಶೆಟ್ಟಿ(32) ಹಾಗೂ ಅಫಜಲಪುರ ನಿವಾಸಿಗಳಾದ ಸಚಿನ್‌ ಅಬ್ಬಾಸ್‌ ಕತ್ತಿ (31), ದ್ರಾಕ್ಷಾಯಣಿ ಕತ್ತಿ(33) ಮೃತರು ಎಂದು ಗುರುತಿಸಲಾಗಿದೆ.

ಕಲಬುರಗಿಯಿಂದ ಶಿರಹಟ್ಟಿ ಫಕ್ಕೀರೇಶ್ವರ ಮಠದ ದರ್ಶನಕ್ಕೆ ತೆರಳುತ್ತಿದ್ದ ಟಾಟಾ ಸುಮೋ ವಾಹನದ ಹಿಂಬದಿಯ ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗೆ ಡಿಕ್ಕಿ ಹೊಡೆದಿದೆ.ಇನ್ನೂ ಡಿಕ್ಕಿ ಹೊಡೆದ ರಭಸಕ್ಕೆ ಟಾಟಾ ಸುಮೋ ವಾಹನ ದಲ್ಲಿದ್ದ ಐದು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಜಿಲ್ಲಾ ಸ್ಪತ್ರೆಗೆ ದಾಖಲಿಸಲಾಗಿದೆ ಇನ್ನೂ ಸುದ್ದಿಯನ್ನು ತಿಳಿದ ನರೇಗಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಗದಗ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.