ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗಾಗಿ ಮತ್ತೊಂದು ಹೋರಾಟ – ಡಿಸೆಂಬರ್ 13 ರಂದು ಬೆಳಗಾವಿಯಲ್ಲಿ ನಡೆಯಲಿದೆ ಸ್ವಾಮಿಜಿಯ ನೇತ್ರತ್ವದಲ್ಲಿ ಪಂಚಮಸಾಲಿ ಸಮಾಜದಿಂದ ಬೃಹತ್ ಪ್ರತಿಭಟನೆ…..

Suddi Sante Desk
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗಾಗಿ ಮತ್ತೊಂದು ಹೋರಾಟ – ಡಿಸೆಂಬರ್ 13 ರಂದು ಬೆಳಗಾವಿಯಲ್ಲಿ ನಡೆಯಲಿದೆ ಸ್ವಾಮಿಜಿಯ ನೇತ್ರತ್ವದಲ್ಲಿ ಪಂಚಮಸಾಲಿ ಸಮಾಜದಿಂದ ಬೃಹತ್ ಪ್ರತಿಭಟನೆ…..

ಬೆಳಗಾವಿ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗಾಗಿ ಮತ್ತೊಂದು ಹೋರಾಟ – ಡಿಸೆಂಬರ್ 13 ರಂದು ಬೆಳಗಾವಿಯಲ್ಲಿ ನಡೆಯಲಿದೆ ಸ್ವಾಮಿಜಿಯ ನೇತ್ರತ್ವದಲ್ಲಿ ಪಂಚಮಸಾಲಿ ಸಮಾಜದಿಂದ ಬೃಹತ್ ಪ್ರತಿಭಟನೆ ಹೌದು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಡಿಸೆಂಬರ್​ 13ರಂದು ಬೆಳಗಾವಿ ಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಸರ್ಕಾರಗಳು ಮೀನಾ ಮೇಷ ಮಾಡುತ್ತಿವೆ.ಹಿಂದಿನ ಸರ್ಕಾರ ನಮಗೆ 2ಡಿ ಮೀಸಲಾತಿ ಘೋಷಣೆ ಮಾಡಲಾಗಿತ್ತು. ಅದಿನ್ನೂ ಅನುಷ್ಠಾನಕ್ಕೆ ಬಂದಿಲ್ಲ ಜೊತೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಮಾಜದ ಮುಖಂ ಡರ ಸಭೆ ಕರೆದು ತೀರ್ಮಾನ ಮಾಡುತ್ತೇವೆ ಎಂದು ಮಾತು ಕೊಟ್ಟು ತಪ್ಪಿದ್ದಾರೆ.

ಈ ಸಂಬಂಧ ಸರ್ಕಾರವನ್ನು ಎಚ್ಚರಿಸಲು ಡಿಸೆಂಬರ್​ 13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಪಂಚಮ ಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂ ಜಯ ಸ್ವಾಮೀಜಿ ಹೇಳಿದರು.ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೋಸ್ಕರ ಹಿಂದೆ ವಿಧಾನಸೌಧದ ಮುಂದೆಯೇ ಹೋರಾಟ ಮಾಡಬೇಕು ಎಂದು ತೀರ್ಮಾನಿಸಿದ್ದೆವು.

ಸಮಾಜದ ಸಭೆಯಲ್ಲಿ ಮೀಸಲಾತಿ ಹೋರಾಟದ ಬಗ್ಗೆ ಚರ್ಚೆ ಮಾಡಿದ್ದೆವು.ಸಿಎಂ ಸಿದ್ದರಾಮಯ್ಯ ನವರನ್ನು ಭೇಟಿಯಾಗಿ ಮಾತುಕತೆ ನಡೆಸಲಾ ಗಿತ್ತು. ಆದಷ್ಟು ಬೇಗನೆ ಸಿಎಂ ಪಂಚಮಸಾಲಿ ಮುಖಂಡರು ಒಳಗೊಂಡು ಬೆಂಗಳೂರಿನಲ್ಲಿ ಸಭೆ ಮಾಡುವುದಾಗಿ ಭರವಸೆ ನೀಡಿದ್ದರು. ಅವತ್ತಿನಿಂ ದ ಇವತ್ತಿನವರೆಗೂ ನಮ್ಮ ಮನವಿಗೆ ಸಿಎಂ ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲವೆಂದರು.ಇನ್ನೂ ಸಧ್ಯ ಚಳಿಗಾಲದ ಅಧಿವೇಶನದ ಒಳಗೆ ಶಾಸಕರ ಸಭೆ ಕರೆದು ಪಂಚಮಸಾಲಿ ಸಮಾಜದ ಮೀಸಲಾತಿ ನಿಲುವು ಸ್ಪಷ್ಟಪಡಿಸಬೇಕು.

ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಡಿ.13ರಂದು ಬೃಹತ್ ಪ್ರತಿಭಟನೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.ಜೊತೆಗೆ ಗಾಂಧಿಭವನ ದಿಂದ ಚೆನ್ನಮ್ಮ ವೃತ್ತದವರೆಗೂ ಪಾದಯಾತ್ರೆ ಮಾಡಿ ಪ್ರತಿಭಟನೆ ಮಾಡಲಾಗುವುದು.ನಮ್ಮ ಹೋರಾಟ ದಶಕಗಳಿಂದ ನಡೆಯುತ್ತಿದೆ. ಅಧಿವೇ ಶನದಲ್ಲಿ ಶಾಸಕರು ಧ್ವನಿ ಎತ್ತುವ ಕೆಲಸ ಮಾಡಲಿ ಸಮಾಜದ ಎಲ್ಲಾ ಶಾಸಕರಿಗೂ ನಾನು ಮನವಿ ಮಾಡುತ್ತೇನೆಂದರು.

ಪಂಚಮಸಾಲಿ ಸಮಾಜದ ಶಾಸಕರು ಪಕ್ಷಾತೀತ ವಾಗಿ ಹೋರಾಟ ಮಾಡಬೇಕು ಆಕ್ರೋಶದ ಕಟ್ಟೆ ಒಡೆಯುವ ಮುನ್ನವೇ ಸರ್ಕಾರ ಸ್ಪಂದಿಸಬೇಕು. ಇನ್ನೂ ಕಾಲ ಮಿಂಚಿಲ್ಲ.ಅಧಿವೇಶನದ ಸಂದರ್ಭ ದಲ್ಲಿ ಸಮಾಜದ ಶಾಸಕರನ್ನು ಕರೆದು ಅವರ ಜತೆಗೆ ಸಭೆ ಮಾಡಿ ಸರ್ಕಾರ ತೀರ್ಮಾನಿಸಲಿ ಎಂದರು.

ಇನ್ನೂ ಈ ಒಂದು ಪ್ರತಿಭಟನೆಯಲ್ಲಿ ಭಾಗವಹಿ ಸುವಂತೆ ಹಲವರಿಗೆ ಸ್ವಾಮಜಿ ಕರೆಯನ್ನು ನೀಡಿದರು

ಸುದ್ದಿ ಸಂತೆ ನ್ಯೂಸ್ ಬೆಳಗಾವಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.