ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ FIR ದಾಖಲು – ಶಾಲಾ ಶಿಕ್ಷಣ ಇಲಾಖೆಯಿಂದ ಹೊರಬಿತ್ತು ಸುತ್ತೋಲೆ…..

Suddi Sante Desk
ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ FIR ದಾಖಲು – ಶಾಲಾ ಶಿಕ್ಷಣ ಇಲಾಖೆಯಿಂದ ಹೊರಬಿತ್ತು ಸುತ್ತೋಲೆ…..

ಬೆಂಗಳೂರು

ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿ ಸಿದರೆ FIR ದಾಖಲು – ಶಾಲಾ ಶಿಕ್ಷಣ ಇಲಾಖೆ ಯಿಂದ ಹೊರಬಿತ್ತು ಸುತ್ತೋಲೆ  ಹೌದು ಇನ್ನು ಮುಂದೆ ಮಕ್ಕಳಿಂದ ಮುಖ್ಯಶಿಕ್ಷಕರು, ಶಿಕ್ಷಕರು ಅಥವಾ ಇತರೆ ಸಿಬ್ಬಂದಿ ಶೌಚಾಲಯ ಸ್ವಚ್ಛಗೊ ಳಿಸಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಜೊತೆಗೆ ಎಫ್ಐಆರ್‌ ದಾಖಲಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಶಾಲಾ ಶೌಚಾಲಯ ನಿರ್ವಹಣೆಗೆ ಎಂಟು ಅಂಶ ಗಳ ಮತ್ತೊಂದು ಸುತ್ತೋಲೆಯನ್ನು ಇಲಾಖೆಯ ಆಯುಕ್ತರಾದ ಕಾವೇರಿ ಅವರು ಹೊರಡಿಸಿದ್ದು ಇದರಲ್ಲಿರುವ ಮುಖ್ಯಾಂಶಗಳು ಕೆಳಗಿನಂತಿದೆ
ಇತ್ತೀಚೆಗೆ ಕೆಲ ಶಾಲೆಗಳಲ್ಲಿ ಮಕ್ಕಳಿಂದ ಶಾಲಾ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಗಳು ಬೆಳಕಿಗೆ ಬಂದು ಪೋಷಕರು,ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಯಲ್ಲಿ ಶನಿವಾರ ಶಾಲಾ ಶೌಚಾಲಯ ನಿರ್ವಹ. ಣೆಗೆ ಎಂಟು ಅಂಶಗಳ ಮತ್ತೊಂದು ಸುತ್ತೋಲೆ ಯನ್ನು ಇಲಾಖೆಯ ಆಯುಕ್ತರಾದ ಕಾವೇರಿ ಅವರು ಹೊರಡಿಸಿದ್ದಾರೆ.

ವಿದ್ಯಾರ್ಥಿಗಳಿಂದ ಶಾಲಾ ಶೌಚಾಲಯ ಸ್ವಚ್ಛ ಗೊಳಿಸುವುದನ್ನು ಕಡ್ಡಾಯವಾಗಿ ನಿಷೇಧಿಸ. ಲಾಗಿದೆ.ಒಂದು ವೇಳೆ ಸ್ವಚ್ಛಗೊಳಿಸಿದ್ದು ಕಂಡು ಬಂದರೆ ಇದಕ್ಕೆ ಕಾರಣರಾದ ಮುಖ್ಯ ಶಿಕ್ಷಕರು, ಶಿಕ್ಷಕರು, ಇತರೆ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಹಾಗೂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗುವುದು.

ಇದು ಸರ್ಕಾರಿ ಶಾಲೆಗಳು ಮಾತ್ರವಲ್ಲ, ಅನು ದಾನಿತ, ಅನುದಾನ ರಹಿತ ಖಾಸಗಿ ಶಾಲೆಗಳಿಗೂ ಅನ್ವಯಿಸುತ್ತದೆ.ಶೌಚಾಲಯ ನಿರ್ವಹಣಾ ಅನು ದಾನ ಈಗಾಗಲೇ ಶಾಲೆಗಳಿಗೆ ಬಿಡುಗಡೆಯಾಗಿದೆ ಈ ಅನುದಾನವನ್ನು ಪ್ರಥಮ ಪ್ರಾಶಸ್ತ್ಯದಲ್ಲಿ ಬಳಸಿಕೊಳ್ಳಬೇಕೆಂದು ಹೇಳಲಾಗಿದೆ.

ಜೊತೆಗೆ ಶಾಲಾ ಎಸ್‌ಡಿಎಂಸಿಗಳ ಸಹಕಾರ ದೊಂದಿಗೆ ಸ್ಥಳೀಯವಾಗಿ ಲಭ್ಯ ಸಂಪನ್ಮೂಲ ಗಳೊಂದಿಗೆ ಶೌಚಾಲಯಗಳ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು.ಎಸ್‌ಡಿಎಂಸಿಗಳು ವಿದ್ಯಾರ್ಥಿ ಗಳಿಗೆ ಶೌಚಾಲಯ ಸ್ವಚ್ಛಗೊಳಿಸದಂತೆ ಅರಿವು ಮೂಡಿಸಬೇಕು.ಶಾಲಾ ಉಸ್ತುವಾರಿ ಮತ್ತು ಮೇಲ್ವಿಚಾರಣೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿ ಗಳು ಈ ಬಗ್ಗೆ ಕಾಲ ಕಾಲಕ್ಕೆ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು.

ಭೇಟಿ ವೇಳೆ ಯಾವುದೇ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಕಂಡು ಬಂದರೆ ತಕ್ಷಣ ಡಿಡಿಪಿಐ,ಬಿಇಒಗಳ ಗಮನಕ್ಕೆ ತರಬೇಕು.
ಡಿಡಿಪಿಐ,ಬಿಇಒಗಳು ಸಂಬಂಧಿಸಿದವರ ವಿರುದ್ಧ ಶಿಸ್ತು ಕ್ರಮ ಜರುಗಿಸಿ, ಎಫ್‌ಐಆರ್‌ ದಾಖಲಿಸ ಬೇಕು.ತಪ್ಪಿದರೆ ನಿಮ್ಮನ್ನೇ ಹೊಣೆಗಾರರನ್ನಾಗಿಸಿ ಶಿಸ್ತು ಕ್ರಮ ಜರುಗಿಸಲಾಗುತ್ತದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.