ಆಧಾರ್ E-KYC’ಗೆ ಅಂತಿಮ ದಿನಾಂಕ ನಿಗದಿಪಡಿಸಿಲ್ಲ – ರಾಜ್ಯದ ‘LPG ಗ್ಯಾಸ್ ಬಳಕೆದಾರ’ರ ಗಮನಕ್ಕೆ…..

Suddi Sante Desk
ಆಧಾರ್ E-KYC’ಗೆ ಅಂತಿಮ ದಿನಾಂಕ ನಿಗದಿಪಡಿಸಿಲ್ಲ –  ರಾಜ್ಯದ ‘LPG ಗ್ಯಾಸ್ ಬಳಕೆದಾರ’ರ ಗಮನಕ್ಕೆ…..

ಬೆಂಗಳೂರು

ರಾಜ್ಯದ ‘LPG ಗ್ಯಾಸ್ ಬಳಕೆದಾರ’ರ ಗಮನಕ್ಕೆ ‘ಆಧಾರ್ E-KYC’ಗೆ ಅಂತಿಮ ದಿನಾಂಕ ನಿಗದಿಪಡಿಸಿಲ್ಲ ಹೌದು ಎಲ್ ಪಿಜಿ ಗ್ಯಾಸ್ ಸಂಪರ್ಕ ಪಡೆದಂತ ಗ್ರಾಹಕರಿಗೆ ಆಧಾರ್ ಸಂಖ್ಯೆ ನೀಡಿ ಇ-ಕೆವೈಸಿ ಅಪ್ ಡೇಟ್ ಮಾಡೋದಕ್ಕೆ ಸೂಚಿಸಲಾಗಿದೆ ಆದರೆ ದಿನಾಂಕ ನಿಗದಿ ಮಾಡಿಲ್ಲ ಎಂಬೊಂದನ್ನು ಇಲಾಖೆ ಸ್ಪಷ್ಟಪಡಿಸಿದೆ.

ಅಲ್ಲದೇ ಅದರ ಗಡುವು ಡಿ.31ಕ್ಕೆ ಮುಕ್ತಾಯವಾ ಗಲಿದೆ. ಆ ನಂತ್ರ ಸಬ್ಸಿಡಿ ಸಿಗೋದಿಲ್ಲ ಅಂತ ಸುದ್ದಿಗಳು ವೈರಲ್ ಆಗಿತ್ತು. ಆದ್ರೇ ಎಲ್ ಪಿಡಿ ಗ್ಯಾಸ್ ಸಂಪರ್ಕಕ್ಕೆ ಇ-ಕೆವೈಸಿ ಅಪ್ ಡೇಟ್ ಮಾಡೋದಕ್ಕೆ ಅಂತಿಮ ದಿನಾಂಕ ನಿಗದಿ ಪಡಿಸಿಲ್ಲ ಅಂತ ಆಹಾರ ಇಲಾಖೆ ಸ್ಪಷ್ಟ ಪಡಿಸಿದೆ.

ಈ ಕುರಿತಂತೆ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಅಡುಗೆ ಅನಿಲ ಸಂಪರ್ಕ ಹೊಂದಿರುವವರು ಆಧಾರ್ ಇ-ಕೆವೈಸಿ ಮಾಡಿಸಲು ಅಂತಿಮ ದಿನಾಂಕವನ್ನು ಕೇಂದ್ರ ಸರ್ಕಾರವು ನಿಗಧಿಪಡಿ ಸಿರುವುದಿಲ್ಲ.

ಸಾರ್ವಜನಿಕರು ತಮ್ಮ ಬಿಡುವಿನ ವೇಳೆಯಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಆಧಾರ್ ಇ-ಕೆವೈಸಿ ಮಾಡಿಸಬಹುದಾಗಿದ್ದು, ಸಾರ್ವಜನಿಕರು ಆತಂಕ ದಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಸರತಿ ಸಾಲಿ ನಲ್ಲಿ ನಿಲ್ಲುವ ಅವಶ್ಯಕತೆ ಇರುವುದಿಲ್ಲ ಎಂದು ತಿಳಿಸಿದೆ.

ಆದ್ದರಿಂದ ಅನಾವಶ್ಯಕವಾಗಿ ಗೊಂದಲ ಅಥವಾ ತಪ್ಪು ಮಾಹಿತಿಯಿಂದ ಗ್ಯಾಸ್ ಏಜೆನ್ಸಿಗಳ ಬಳಿ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿರುವುದಿಲ್ಲ ಹಾಗೂ ಸಿಲಿಂಡರ್ ನ್ನು  ಮನೆಗೆ ಡೆಲಿವರಿ ಪಡೆಯುವ ವೇಳೆಯಲ್ಲಿ ಕೂಡ ಇ-ಕೆವೈಸಿ ಮಾಡಿಸಲು ಅವಕಾಶವಿರುತ್ತದೆ.

ಅಲ್ಲದೇ ಹೆಲೋ ಬಿಪಿಸಿಎಲ್, ಇಂಡಿಯನ್ ಆಯ್ಲ್ ಒನ್ ಮತ್ತು ವಿಟ್ರನ್ ಹೆಚ್‍ಪಿ ಗ್ಯಾಸ್ ಈ ಮೊಬೈಲ್ ಆಪ್‍ಗಳ ಮೂಲಕ ಇ-ಕೆವೈಸಿ ಮಾಡಿಸಬಹುದಾಗಿದೆ ಎಂದು ಹೇಳಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು……

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.