ಬೆಂಗಳೂರು –
ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿರುವ ನಾಡಿನ ಶಿಕ್ಷಕರಿಗೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ನೆಮ್ಮದಿ ಯ ಸುದ್ದಿಯೊಂದನ್ನು ನೀಡಿದ್ದಾರೆ.ಹೌದು ಇವತ್ತು ಎಲ್ಲೇಡೆ ಶಿಕ್ಷಕ ದಿನಾಚರಣೆ ಸಂದರ್ಭದಲ್ಲಿಯೇ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ.ದೂರದ ಜಿಲ್ಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರು ತಮ್ಮ ಸೇವಾವಧಿಯಲ್ಲಿ ಒಂದು ಸಲ ಅವರು ಇಷ್ಟಪಡುವ ಜಿಲ್ಲೆಗೆ ವರ್ಗಾವಣೆ ಮಾಡಲು ಸರ್ಕಾರ ಮುಂದಾಗಿದ್ದು ಇದನ್ನು ಶಿಕ್ಷಣ ಸಚಿವರೇ ಹೇಳಿದ್ದಾರೆ.
ಈ ಕೂಡಲೇ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಈ ಬಗ್ಗೆ ಅಭಿಪ್ರಾಯ ಸಂಗ್ರಹಿಸುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸೂಚನೆ ನೀಡಿದ್ದಾರೆ.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಮಾಡಿದ ಮನವಿ ಅನ್ವಯ, ದೂರದ ಜಿಲ್ಲೆಯಲ್ಲಿ ಕೆಲಸ ಮಾಡುವ ಶಿಕ್ಷಕರಿಗೆ ಒಮ್ಮೆ ತವರು ಜಿಲ್ಲೆಗೆ ಬಯಸಿದ ಜಿಲ್ಲೆಗೆ ವರ್ಗಾವಣೆ ಮಾಡಿಕೊಡಲಾಗುತ್ತದೆ.ತವರು ಜಿಲ್ಲೆಗೆ ವರ್ಗಾವಣೆ ಬಯಸುವವರಿಗೆ ಪರಸ್ಪರ ವರ್ಗಾವಣೆಗೆ ಅವಕಾಶ ಮಾಡಿಕೊಡಬೇಕೆಂದು ಶಿಕ್ಷಕರು ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚನೆ ನೀಡಿದ್ದಾರೆ.ಪತಿ-ಪತ್ನಿ ಪ್ರಕರಣ ಸೇರಿದಂತೆ ಶಿಕ್ಷಕರಿಗೆ ವರ್ಗಾವಣೆ ಮಾಡಿಕೊಳ್ಳಲು ಅನುಕೂಲವಾಗಲಿದೆ
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿ ಕಾರಿಗಳು ಮಾಡಿದ ಮನವಿ ಅನ್ವಯ ದೂರದ ಜಿಲ್ಲೆಯಲ್ಲಿ ಕೆಲಸ ಮಾಡುವ ಶಿಕ್ಷಕರಿಗೆ ಒಮ್ಮೆ ತವರು ಜಿಲ್ಲೆಗೆ ಬಯಸಿದ ಜಿಲ್ಲೆಗೆ ವರ್ಗಾವಣೆ ಮಾಡಿಕೊಡಲಾಗುತ್ತದೆ.ತವರು ಜಿಲ್ಲೆಗೆ ವರ್ಗಾವಣೆ ಬಯಸುವವರಿಗೆ ಪರಸ್ಪರ ವರ್ಗಾವಣೆಗೆ ಅವಕಾಶ ಮಾಡಿಕೊಡಬೇಕೆಂದು ಶಿಕ್ಷಕರು ಬೇಡಿಕೆ ಇಟ್ಟಿದ್ದು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚನೆ ನೀಡಿದ್ದು ಇದರಿಂದಾಗಿ ಶಿಕ್ಷಕರಿಗೆ ಶೀಘ್ರದಲ್ಲೇ ತಾವು ಎಂದುಕೊಂಡಂತಾದರೆ ಅನುಕೂಲ ಆಗುತ್ತದೆ