This is the title of the web page
This is the title of the web page

Live Stream

[ytplayer id=’1198′]

December 2024
T F S S M T W
 1234
567891011
12131415161718
19202122232425
262728293031  

| Latest Version 8.0.1 |

Local News

ಕೋವಿಡ್ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಗೆ ಗೌರಿ ಗಣೇಶೋ ತ್ಸವ ಹಬ್ಬದ ಆಚರಣೆಗೆ ಜಿಲ್ಲಾಡಳಿತದಿಂದ ಮಾರ್ಗಸೂಚಿ ಪ್ರಕಟ…..

WhatsApp Group Join Now
Telegram Group Join Now

ಧಾರವಾಡ –

ಧಾರವಾಡ ಜಿಲ್ಲೆಯಾದ್ಯಂತ ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಮತ್ತು ಕೋವಿಡ್-19 ಸಾಂಕ್ರಾಮಿಕ ರೋಗ ಹರಡದಂತೆ ಕ್ರಮ ಕೈಗೊಳ್ಳಬೇಕಾಗಿರುವುದು ಅವಶ್ಯವಿರುವುದ ರಿಂದ ಸಾರ್ವಜನಿಕರು ಜಿಲ್ಲಾಡಳಿತ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ಗೌರಿ-ಗಣೇಶೋತ್ಸವ ಹಬ್ಬವನ್ನು ಆಚರಿಸಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.

ಗಣೇಶ ಚತುರ್ಥಿ ಹಬ್ಬದ ಆಚರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳು

ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ, ಖಾಸಗಿ,ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಟಾಪಿಸಬೇಕು.ಪಾರಂಪರಿಕ ಗಣೇಶೋತ್ಸವ ಕ್ಕಾಗಿ ಗಣೇಶೋತ್ಸವ ಸಮಿತಿ ಗಳು,ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮಹಾನಗರ ಪಾಲಿಕೆ, ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯತಕ್ಕದ್ದು.

ಒಂದು ನಗರ ಪ್ರದೇಶಗಳಲ್ಲಿ ವಾರ್ಡಿಗೆ ಒಂದರಂತೆ ಸಾರ್ವಜನಿಕ ಗಣೇಶೋತ್ಸವವನ್ನು ಮಾತ್ರ ಆಚರಿಸಲು ಪ್ರೋತ್ಸಾಹಿಸುವುದು. ಗಣೇಶ ಆಚರಣೆಯನ್ನು ಗರಿಷ್ಠ 5 ದಿನಗಳಿಗಿಂತ ಹೆಚ್ಚಿನ ದಿನ ಆಚರಿಸುವಂತಿಲ್ಲ. ಗಣೇಶ್ ಪ್ರತಿಷ್ಠಾಪನಾ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತ ವಾದ ಆವರಣವನ್ನು ನಿರ್ಮಿಸುವುದು. ಮತ್ತು ಒಮ್ಮೆಲೆ 20 ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾದಿಗಳಿಗೆ ಅನುವು ಮಾಡುವುದು ಗಣೇಶ ಆಚರಣೆಯ ಆಯೋಜಕರು ಕೋವಿಡ್-19 ರ ನೆಗೆಟಿವ್ ರಿಪೋರ್ಟ್ ಮತ್ತು ಲಸಿಕೆ ಪಡೆದಿ ರುವ ಬಗ್ಗೆ ಪ್ರಮಾಣ ಪತ್ರವನ್ನು ಹೊಂದಿರು ವುದು ಕಡ್ಡಾಯವಾಗಿದೆ. ಗಣೇಶ ಆಚರಣೆಯ ಆಯೋಜಿತ ಸ್ಥಳಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಆಯೋಜಕರು ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು, ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿ ಆಗದಂತೆ ಗಣೇಶ ಪ್ರತಿಷ್ಠಾಪನೆ ಮಾಡಬೇಕು. ಗಣೇಶ ಮೂರ್ತಿಗಳ ಪ್ರತಿಷ್ಠಾಪನ ಸ್ಥಳದಲ್ಲಿ ಯಾವುದೇ ರೀತಿ ಸಾಂಸ್ಕೃತಿಕ, ಸಂಗೀತ, ನೃತ್ಯ ಹಾಗೂ ಮುಖ್ಯವಾಗಿ ಡಿ.ಜೆ.ಮೂಲಕ ಹಾಗೂ ಇನ್ನಿತರೆ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶ ವಿರುವುದಿಲ್ಲ.ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲೀ ಅಥವಾ ಯಾವುದೇ ಸಂದರ್ಭದಲ್ಲಿ ಯಾವುದೇ ಮೆರವಣಿಗೆಯನ್ನು ಹೊರಡಿಸತಕ್ಕದ್ದಲ್ಲ ಹಾಗೂ ಮಾಡತಕ್ಕದ್ದಲ್ಲ. ಇದನ್ನು ಸಂಪೂರ್ಣವಾಗಿ ನಿರ್ಭಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವುದು, ಅವುಗಳನ್ನು ಮನೆಯಲ್ಲಿ ವಿಸರ್ಜಿಸುವುದು. ಸರ್ಕಾರಿ, ಖಾಸಗಿ, ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ಅತಿ ಕನಿಷ್ಠ ಜನರೊಂದಿಗೆ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ, ಜಿಲ್ಲಾಡಳಿತ, ಹತ್ತಿರದ ಸ್ಥಳೀಯ ಸಂಸ್ಥೆಗಳು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕ್‍ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್ ಗಳಲ್ಲಿ ವಿಸರ್ಜಿಸಬೇಕು. ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನ, ಸಾರ್ವಜನಿಕ ಸ್ಥಳಗಳಲ್ಲಿ ದಿನನಿತ್ಯ ಸ್ಯಾನಿಟೈಜೇಶನ್ ಮಾಡಬೇಕು.ಹಾಗೂ ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಜರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸಿರಬೇಕು. ದರ್ಶನಕ್ಕಾಗಿ ಬರುವ ಭಕ್ತಾದಿ ಗಳಿಗೆ ಕನಿಷ್ಠ 6 ಅಡಿ ಸಾಮಾಜಿಕ ಅಂತರ ವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲ ಅಗತ್ಯ ಕ್ರಮಗಳನ್ನು ಆಯೋಜಕರು ಕೈಗೊಳ್ಳಬೇಕು. ಗಣೇಶ್ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸತಕ್ಕದ್ದು. ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಮತ್ತು ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂದರ್ಭಾನುಸಾರವಾಗಿ ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರಪಾಲಿಕೆ, ಗ್ರಾಮ ಪಂಚಾಯತ, ಇತರೆ ಸ್ಥಳೀಯ ಸಂಸ್ಥೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆ ಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ತಪ್ಪದೇ ಕಡ್ಡಾಯವಾಗಿ ಮತ್ತು ಕಟ್ಟುನಿಟ್ಟಾಗಿ ಆಯೋಜಕರು ಸೇರಿದಂತೆ ಎಲ್ಲರೂ ಪಾಲಿಸತಕ್ಕದ್ದು.ಹಬ್ಬ ಹರಿದಿನಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕ ವಾಗಿರುವುದರಿಂದ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ, ಮಾರ್ಗಸೂಚಿಗಳನ್ನು ಉಲ್ಲಂಘಿ ಸುವವರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿ ಶಿಸ್ತಿನ ಮತ್ತು ಕಾನೂನು ಕ್ರಮ ಹಾಗೂ ಇದಕ್ಕೆ ಅನ್ವಯ ವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗು ವುದು ಎಂದು ಜಿಲ್ಲಾಧಿಕಾರಿಗಳು ಆದೇಶ ತಿಳಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk