ಕಂಪ್ಯೂಟರ್ ಸಾಕ್ಷರತಾ ಪರೀಕ್ಷಾ ವಿಚಾರ ಕುರಿಂತಂತೆ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ – ತಿದ್ದುಪಡಿಯೊಂದಿಗೆ ಪ್ರಕಟಗೊಂಡಿತು ರಾಜ್ಯ ಸರ್ಕಾರದಿಂದ ಹೊಸದೊಂದು ವಿಧೇಯಕ…..

Suddi Sante Desk
ಕಂಪ್ಯೂಟರ್ ಸಾಕ್ಷರತಾ ಪರೀಕ್ಷಾ ವಿಚಾರ ಕುರಿಂತಂತೆ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ – ತಿದ್ದುಪಡಿಯೊಂದಿಗೆ ಪ್ರಕಟಗೊಂಡಿತು ರಾಜ್ಯ ಸರ್ಕಾರದಿಂದ ಹೊಸದೊಂದು ವಿಧೇಯಕ…..

ಬೆಂಗಳೂರು

ಕಂಪ್ಯೂಟರ್ ಸಾಕ್ಷರತಾ ಪರೀಕ್ಷಾ ವಿಚಾರ ಕುರಿ ತಂತೆ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ – ತಿದ್ದುಪಡಿಯೊಂದಿಗೆ ಪ್ರಕಟಗೊಂಡಿತು ರಾಜ್ಯ ಸರ್ಕಾರದಿಂದ ಹೊಸದೊಂದು ವಿಧೇಯಕ ಹೌದು ರಾಜ್ಯದ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಕುರಿತಂತೆ ರಾಜ್ಯ ಸರ್ಕಾರವು ವಿಧೇಯಕವನ್ನು ಪ್ರಕಟ ಮಾಡಿದೆ.

ಹೌದು ತಿದ್ದುಪಡಿ ವಿಧೇಯಕ ʻಗೆಜೆಟ್ʼನ್ನು ರಾಜ್ಯ ಸರ್ಕಾರ ಪ್ರಕಟ ಮಾಡಿದೆ.ರಾಜ್ಯ ಸರ್ಕಾರಿ ನೌಕರರ ಕಂಪ್ಯೂಟರ್‌ ಸಾಕ್ಷಾರತಾ ಪರೀಕ್ಷೆಗೆ ಸಂಬಂಧಿಸಿದಂತೆ ತಿದ್ದುಪಡಿ ವಿಧೇಯಕದ ಕುರಿತು ರಾಜ್ಯ ಸರ್ಕಾರವು ರಾಜ್ಯಪತ್ರವನ್ನು ಪ್ರಕಟಿಸಿದೆ.ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ 1978 (1990 ರ ಕರ್ನಾಟಕ ಅಧಿನಿಯಮ (14) 8ನೇ ಪ್ರಕರಣದೊಂದಿಗೆ 3ನೇ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ

ಕರ್ನಾಟಕ ಸರ್ಕಾರವು ರಚಿಸಿರುವ ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ನಿಯಮಗಳ ಕರಡನ್ನು ಸದರಿ ಅಧಿನಿಯಮದ 3ನೇ ಪ್ರಕರ ಣದ (2)ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಇದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ

ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ಸೂಚಿಸಲಾಗಿದೆ.ಸದರಿ ಕರಡು ನಿಯಮಗಳಿಗೆ ಸಂಬಂಧಪಟ್ಟಂತೆ ಮೇಲೆ ಗೊತ್ತುಪಡಿಸಿದ ಅವಧಿ ಕೊನೆಗೊಳ್ಳುವ ಮುಂಚೆ ಯಾರೇ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ.

ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಕಾರ್ಯದರ್ಶಿ,ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಿಧಾನಸೌಧ, ಬೆಂಗಳೂರು-560001 ಇವರಿಗೆ ಸಲ್ಲಿಸತಕ್ಕದ್ದು ಎಂದು ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.