ಸಾರಿಗೆ ನೌಕರರ ಹೋರಾಟಕ್ಕೆ ಮಹೂರ್ತ ಫಿಕ್ಸ್ – ಮಾರ್ಚ್ 4 ರಿಂದ ನಡೆಯಲಿದೆ ಸಾರಿಗೆ ನೌಕರರ ಅನಿರ್ದಿಷ್ಟಾವಧಿಯ ಧರಣಿ…..

Suddi Sante Desk
ಸಾರಿಗೆ ನೌಕರರ ಹೋರಾಟಕ್ಕೆ ಮಹೂರ್ತ ಫಿಕ್ಸ್ – ಮಾರ್ಚ್ 4 ರಿಂದ ನಡೆಯಲಿದೆ ಸಾರಿಗೆ ನೌಕರರ ಅನಿರ್ದಿಷ್ಟಾವಧಿಯ ಧರಣಿ…..

ಬೆಂಗಳೂರು

ಸಾರಿಗೆ ನೌಕರರ ಹೋರಾಟಕ್ಕೆ ಮಹೂರ್ತ ಫಿಕ್ಸ್ – ಮಾರ್ಚ್ 4 ರಿಂದ ನಡೆಯಲಿದೆ ಸಾರಿಗೆ ನೌಕರರ ಅನಿರ್ದಿಷ್ಟಾವಧಿಯ ಧರಣಿ ಹೌದು

ಕೆಲವೊಂದಿಷ್ಟು ಬೇಡಿಕೆಗಳನ್ನು ಮುಂದಿಟ್ಟು  ಕೊಂಡು ಸಾರಿಗೆ ನೌಕರರು ಮತ್ತೆ ಹೋರಾಟಕ್ಕೆ ಮುಂದಾಗಿದ್ದಾರೆ.ಹೌದು ಮಾರ್ಚ್ 4 ರಿಂದ ಬೆಂಗಳೂರಿನಲ್ಲಿ ಸಾರಿಗೆ ನೌಕರರು ಅನಿರ್ದಿ ಷ್ಟಾವಧಿ ಧರಣಿಗೆ ನಿರ್ಧಾರವನ್ನು ಕೈಗೊಂಡಿದ್ದಾರೆ ಈಗಾಗಲೇ ಈ ಒಂದು ಕುರಿತಂತೆ ದಿನಾಂಕವು ಕೂಡಾ ಫಿಕ್ಸ್ ಆಗಿದ್ದು ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೀದಿಗಿಳಿಯಲಿದ್ದಾರೆ.

ಹೌದು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮತ್ತೆ ಬೀದಿಗೆ ಇಳಿಯ ಲಿದ್ದಾರೆ.ಸರ್ಕಾರಿ ನೌಕರರ ಸರಿಸಮಾನ ವೇತನ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನೌಕರರು ಪ್ರತಿಭಟಿಸಲು ತೀರ್ಮಾನಿಸಿದ್ದಾರೆ.ಪ್ರಮುಖವಾಗಿ ಈ ಹಿಂದೆ ಸಾರಿಗೆ ನೌಕರರ ಮುಷ್ಕರಗಳಲ್ಲಿ ಸಿಬ್ಬಂದಿ ಮೇಲೆ ದಾಖಲಾದ ಪ್ರಕರಣ ಹಿಂಪಡೆಯಬೇಕು. ನಮಗೂ ಸರಿಸಮಾನ ವೇತನ,ಸೌಲಭ್ಯ ಕಲ್ಪಿಸಬೇಕು ಎಂದು ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆಯಿಂದ ಈ ಒಂದು ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ.

ಕಳೆದ 2020ರ ಡಿಸೆಂಬರ್ ಹಾಗೂ ನಂತರ ವರ್ಷದ 2021ರ ಏಪ್ರಿಲ್ ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿ ಕಾರ್ಮಿಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಅವರ ವಿರುದ್ಧ ಕೈಗೊಂಡ ಎಲ್ಲಾ ಶಿಸ್ತಿನ ಕ್ರಮಗಳನ್ನು ಹಾಗೂ ದಾಖಲಾದ 60ಕ್ಕೂ ಹೆಚ್ಚು ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಬಿ.ಎಸ್.ಸುರೇಶ್ ಹೇಳಿದರು.ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳಕ್ಕೆ ನಿಯೋಜಿಸಬೇಕು. 2020ರ ಜ.1ರಿಂದ ಅನ್ವಯವಾಗುವಂತೆ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗೆ ಒಂದೇ ಕಂತಿನಲ್ಲಿ ವೇತನದ ಹಿಂಬಾಕಿ ಪಾವತಿಸಬೇಕು.ಅಲ್ಲದೇ 2020ರಿಂದ ನಿವೃತ್ತಿ ಯಾದ ನೌಕರರಿಗೆ ವೇತನ ವಿಮರ್ಶೆ ಮಾಡಿ ಬಾಕಿ ಹಿಂಬಾಕಿ ಮೊತ್ತವನ್ನು ತ್ವರಿತವಾಗಿ ಪಾವತಿ ಮಾಡಬೇಕು ಎಂದು ತಿಳಿಸಿದರು.

ಉಚಿತ ಆರೋಗ್ಯ ಭಾಗ್ಯ ಯೋಜನೆ ಜಾರಿ ಗೊಳಿಸಬೇಕು.ಚುನಾವಣಾ ಪೂರ್ವ ಪ್ರಣಾಳಿ  ಕೆಯಲ್ಲಿರುವಂತೆ ಸಮಾನ ವೇತನ ಮತ್ತು ಸೌಲ ಸೌಭ್ಯವನ್ನು ಸಾರಿಗೆ ನೌಕರರಿಗೂ ಸರ್ಕಾರ ವಿಸ್ತರಣೆ ಮಾಡಬೇಕು.ಕಾರ್ಮಿಕರ ಸಂಸ್ಥೆಗೆ ಕೂಡಲೇ ಚುನಾವಣೆ ನಡೆಸಿ, ಮಾನ್ಯತೆ ಪ್ರಶ್ನೆ ಇತ್ಯರ್ಥಗೊಳಿಸಬೇಕು ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದರು.

ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರಕ್ಕೆ ಒತ್ತಡ ತರಲು ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಹೆಚ್ಚಿನ ಸಂಖ್ಯೆ ಯಲ್ಲಿ ನೌಕರರು ಪಾಲ್ಗೊಳ್ಳುವಂತೆ ಕರೆ ನೀಡಿದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.