ಹಾವೇರಿ –
ಹಿರಿಯ ಪತ್ರಕರ್ತ ಗಂಗಾಧರ ಹೂಗಾರ ನಿಧನರಾಗಿದ್ದಾರೆ.ಹಾವೇರಿ ಜಿಲ್ಲೆಯಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ಪತ್ರಕರ್ತರಾಗಿದ್ದರು ಇವರು. ಗಂಗಾಧರ ಹೂಗಾರ ಮೂವತ್ತು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದರು.ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು.ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.ನಿನ್ನೆ ಹಾವೇರಿ ಜಿಲ್ಲಾಸ್ಪತ್ರೆಗೆ ಕರೆತಂದು ದಾಖಲು ಮಾಡಲಾಗಿತ್ತು.
ಇವತ್ತು ಬೆಳಿಗ್ಗೆ ನಿಧನರಾದರು. ಅಗಲಿದ ಇವರು
ಪತ್ನಿ, ಇಬ್ಬರು ಮಕ್ಕಳಿದ್ದಾರೆ.ಸಂಜೆ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಿತು.ಇನ್ನೂ ಅಗಲಿದ ಹಿರಿಯ ಪತ್ರಕರ್ತ ನಿಧನಕ್ಕೆ ಹುಬ್ಬಳ್ಳಿ ಧಾರವಾಡ ಹಾವೇರಿ ಜಿಲ್ಲೆಯ ಕಾರ್ಯನಿರತ ಪತ್ರಕರ್ತರು ಸಂತಾಪ ಸೂಚಿಸಿದ್ದಾರೆ.