ಶಿಕ್ಷಕರ ಮೇಲೆ ಕ್ರಮಕೈಗೊಳ್ಳಲು ಸೂಚನೆ – ಗಂಭೀರವಾಗಿ ಪರಿಗಣಿಸಿದ ಇಲಾಖೆ…..

Suddi Sante Desk
ಶಿಕ್ಷಕರ ಮೇಲೆ ಕ್ರಮಕೈಗೊಳ್ಳಲು ಸೂಚನೆ – ಗಂಭೀರವಾಗಿ ಪರಿಗಣಿಸಿದ ಇಲಾಖೆ…..

ಬೆಂಗಳೂರು

5, 8, 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಫಲಿತಾಂಶದಲ್ಲಿ ಲೋಪ ಎಸಗಿದ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ ಹೌದು ಸುಪ್ರೀಂಕೋರ್ಟ್ ನಿಂದ 5, 8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷಾ ಫಲಿತಾಂಶಕ್ಕೆ ತಡೆ ನೀಡಿ ಮಧ್ಯಂತರ ಆದೇಶ ನೀಡಿದೆ

ಮಂಡಳಿ ಮಾತ್ರ ಫಲಿತಾಂಶದಲ್ಲಿ ಆದ ಲೋಪ ಸರಿಪಡಿಸಲು ಕ್ರಮ ಕೈಗೊಂಡಿದೆ.ಲೋಪ ದೋಷಗಳ ಬಗ್ಗೆ ಕೂಲಂಕಶವಾಗಿ ಪರಿಶೀಲಿಸಿ ಅಗತ್ಯವಿದ್ದಲ್ಲಿ ಉತ್ತರ ಪತ್ರಿಕೆಗಳ ಮೌಲ್ಯಮಾ ಪನ ಮಾಡಿಸಲು ಮತ್ತು ಸರಿಯಾಗಿ ಮೌಲ್ಯ ಮಾಪನ ಮಾಡದ ತಪ್ಪಿತಸ್ಥ ಶಿಕ್ಷಕರ ವಿರುದ್ಧ ಕ್ರಮ ಕೈಗೊಂಡು ಏ. 15 ರೊಳಗೆ ವರದಿ ಸಲ್ಲಿಸಲು ಮಂಡಳಿಯ ಅಧ್ಯಕ್ಷರು ಸೂಚನೆ ನೀಡಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆಯ ಮೌಲ್ಯಮಾಪ ನದಲ್ಲಿ ಲೋಪ ದೋಷಗಳು ಕಂಡು ಹೊಂದಿವೆ ಎಂದು ಖಾಸಗಿ ಶಾಲಾ ಸಂಘಟನೆ ಕ್ಯಾಮ್ಸ್ ಆರೋಪಿಸಿತ್ತು.ಸರಿ ಉತ್ತರ ಬರೆದಿದ್ದರೂ ಸರಿಯಾದ ಅಂಕ ನೀಡಿಲ್ಲ.

ಉತ್ತಮವಾಗಿ ಓದುವ ಮಕ್ಕಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕಡಿಮೆ ಅಂಕ ನೀಡಲಾಗಿದೆ. ಫಲಿತಾಂಶದ ಅಂಕಿ ಅಂಶಗಳ ಲೆಕ್ಕವನ್ನು ತಪ್ಪಾಗಿ ಮಾಡಲಾಗಿದೆ. ಕೆಲವು ವಿಷಯಗಳಲ್ಲಿ ಗರಿಷ್ಠ ಅಂಕಗಳಿಗಿಂತ ಹೆಚ್ಚು ಅಂಕ ನೀಡಿರುವ ಪ್ರಕರಣ ಗಳು ನಡೆದಿವೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು……

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.