ಧಾರವಾಡ –
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ (ರಿ)ನವಲೂರ ಕಾರ್ಯಕ್ಷೇತ್ರದಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ನಡೆಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಹು ಧಾ ಮಹಾ ನಗರ ಪಾಲಿಕೆ ಸದಸ್ಯರು ಡಾ.ಮಯೂರ ಮನೋ ಹರ ಮೋರೆ ಹಾಗೂ ಶ್ರೀ ಮಂಜುನಾಥ ಬಡಕುರಿ
ನೆರವೇರಿಸಿದರು.
ಈ ಸಂದಭ೯ದಲ್ಲಿ ಡಾ.ಮಯೂರ ಮೋರೆ ಅವರು ಮಾತನಾಡಿ ಮಹಿಳೆಯರಿಗೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಪೌಷ್ಠಿಕ ಆಹಾರ ಸೇವನೆ ಅಗತ್ಯ
ಪೌಷ್ಠಿಕ ಆಹಾರ ಸೇವನೆಯಿಂದ ದೇಹದಲ್ಲಿ ರೋಗ ನಿರೋದಕ ಶಕ್ತಿ ಹೆಚ್ಚುತ್ತದೆ.ಹಾಗೂ ದೇಹಕ್ಕೆ ಎಳೆಯ ವಯಸ್ಸಿನಿಂದಲೇ ಪೌಷ್ಠಿಕ ಆಹಾರ ಸೇವನೆ ಮಾಡಿದ್ದಲ್ಲಿ ದೇಹ ಶಕ್ತಿಯನ್ನು ಹೊಂದಿ ರೋಗವನ್ನು ತಡೆಗಟ್ಟಲು ಸಹಕಾರಿಯಾಗಿದೆ ಎಂದರು
ಈ ಕಾರ್ಯಕ್ರಮ ದಲ್ಲಿ ಒಕ್ಕೂಟದ ಅಧ್ಯಕ್ಷರು ಜ್ಞಾನವಿಕಾಸ ಸಮನ್ವಯಾಧಿಕಾರಿ, ಸೇವಾಪ್ರತಿ ನಿಧಿ,ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.