ತುಮಕೂರಿನಲ್ಲೂ ರಾಜ್ಯ ಸರ್ಕಾರಿ ನೌಕರರ ಪ್ರತಿಭಟನೆ – ಜಿಲ್ಲಾಧ್ಯಕ್ಷ ಎನ್ ನರಸಿಂಹರಾಜು ನೇತ್ರತ್ವದಲ್ಲಿ ಪ್ರತಿಭಟನೆ ಮನವಿ ಸಲ್ಲಿಕೆ…..

Suddi Sante Desk
ತುಮಕೂರಿನಲ್ಲೂ ರಾಜ್ಯ ಸರ್ಕಾರಿ ನೌಕರರ ಪ್ರತಿಭಟನೆ – ಜಿಲ್ಲಾಧ್ಯಕ್ಷ ಎನ್ ನರಸಿಂಹರಾಜು ನೇತ್ರತ್ವದಲ್ಲಿ ಪ್ರತಿಭಟನೆ ಮನವಿ ಸಲ್ಲಿಕೆ…..

ತುಮಕೂರು

7ನೇ ವೇತನ ಜಾರಿಗೆ ಒತ್ತಾಯಿಸಿ ಸೇರಿದಂತೆ ವಿವಿಧ ಬೇಡಿಕೆ ಗಳ ಈಡೇರಿಕೆಗೆ ಒತ್ತಾಯಿಸಿ ಕರೆ ನೀಡಲಾಗಿರುವ ರಾಜ್ಯ ಸರ್ಕಾರಿ ನೌಕರರ ಹೋರಾಟಕ್ಕೆ ತುಮಕೂರಿನಲ್ಲೂ ಬೆಂಬಲ ಕಂಡು ಬಂದಿತು.ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು 7ನೇ ವೇತನ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಪ್ರತಿಭಟನೆ ನಡೆಸಿದರು

:ಸರ್ಕಾರಿ ನೌಕರರ ವೇತನ ಹೆಚ್ಚಳ ಸಂಬಂಧ ಸಲ್ಲಿಕೆಯಾಗಿರುವ 7ನೇ ವೇತನ ಆಯೋಗದ ವರದಿಯನ್ನು ಯಥಾವತ್ ಜಾರಿ ಮಾಡಬೇಕು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ನೌಕರರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿ ಮಾಡಬೇಕು. ರಾಜಸ್ಥಾನ, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೆ ಈಗಾಗಲೇ ತರಲಾಗಿದೆ.

ಕಳೆದ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಪಿಎಸ್ ಜಾರಿ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಕೊಟ್ಟ ಮಾತಿನಂತೆ ನಡೆದುಕೊಂಡು, ಜಾರಿಗೆ ತರಬೇಕು ಎಂದು ಆಗ್ರಹಿಸಿದರು.ನೌಕರರು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ‘ಕರ್ನಾಟಕ ಆರೋಗ್ಯ ಸಂಜೀವಿನಿ’ ಯೋಜನೆಗೆ ಅನುಮೋದನೆ ನೀಡಬೇಕು

ಹಿಂದಿನ ಸರ್ಕಾರ ಆಯವ್ಯಯದಲ್ಲಿ ಘೋಷಿಸಿದ್ದು ಈವರೆಗೂ ಜಾರಿಗೊಳಿಸಿಲ್ಲ. ನೌಕರರ ವೇತನದಿಂದ ಪ್ರತಿ ತಿಂಗಳು ವೃಂದ ವಾರು ವಂತಿಗೆ ಕಡಿತಮಾಡುತ್ತಿದ್ದು ಇದರಿಂದ ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯಾಗುವು ದಿಲ್ಲ. ತಾಂತ್ರಿಕ ಹಾಗೂ ಇನ್ನಿತರ ಕಾರಣಗಳನ್ನು ನೀಡಿ ಯೋಜನೆ ಜಾರಿಗೊಳಿಸಲು ಅನಗತ್ಯ ವಿಳಂಬ ಮಾಡಲಾಗುತ್ತಿದೆ.

ತಕ್ಷಣ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಎನ್.ನರಸಿಂಹರಾಜು ನೇತೃತ್ವದಲ್ಲಿ ನೌಕರರು ಮನವಿ ಪತ್ರ ಸಲ್ಲಿಸಿದರು. ಸಂಘದ ಜಿಲ್ಲಾ ಕಾರ್ಯದರ್ಶಿ ಟಿ.ಎನ್.ಜಗದೀಶ್, ಖಜಾಂಚಿ ಲಕ್ಷ್ಮಣ್, ವಿವಿಧ ಇಲಾಖೆ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸುದ್ದಿ ಸಂತೆ ನ್ಯೂಸ್ ತುಮಕೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.