ಹುಬ್ಬಳ್ಳಿಯಲ್ಲಿ ಕಳ್ಳತನ ಆರೋಪಿ ಅರುಣ್ ಮೇಲೆ ಪೊಲೀಸರ ಗುಂಡೇಟು – ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಪೈರಿಂಗ್ ಮಾಡಿದ ಇನ್ಸ್ಪೇಕ್ಟರ್ ಹೂಗಾರ‌…..ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ಗಾಯ…..

Suddi Sante Desk
ಹುಬ್ಬಳ್ಳಿಯಲ್ಲಿ ಕಳ್ಳತನ ಆರೋಪಿ ಅರುಣ್ ಮೇಲೆ ಪೊಲೀಸರ ಗುಂಡೇಟು – ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಪೈರಿಂಗ್ ಮಾಡಿದ ಇನ್ಸ್ಪೇಕ್ಟರ್ ಹೂಗಾರ‌…..ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ಗಾಯ…..

ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಮತ್ತೆ ಪೊಲೀಸರ ಪಿಸ್ತೂಲ್ ಸದ್ದು ಮಾಡಿದೆ ಕಳೆದ ವಾರವಷ್ಟೇ ಕಳ್ಳತನದ ಆರೋಪಿ ಮೇಲೆ ಪೈರಿಂಗ್ ಮಾಡಿದ್ದ ಪೊಲೀಸರು ಮತ್ತೆ  ಆರೋಪಿಯೊಬ್ಬನ ಮೇಲೆ ಗುಂಡು ಹಾರಿಸಿದ್ದಾರೆ

ಈ ಹಿಂದೆ ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿ ಯಲ್ಲಿ ನಡೆದ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿ ದಂತೆ ಪ್ರಮುಖ ಆರೋಪಿ ಫರ್ಹಾನ್ ಕಾಲಿಗೆ ಗುಂಡು ಹಾರಿಸಿರುವ ಘಟನೆ ಬೆನ್ನಲ್ಲೇ ಇದೀಗ ಹುಬ್ಬಳ್ಳಿ ಪೋಲಿಸರು ಮತ್ತೊಂದು ಪ್ರಕರಣದಲ್ಲಿ ನಟೋರಿಯಸ್ ದರೋಡೆಕೋರನ ಮೇಲೆ ಗುಂಡು ಹಾರಿಸಿದ್ದಾರೆ.

ಹುಬ್ಬಳ್ಳಿಯ ಉಪನಗರ ಠಾಣೆಯ ಇನ್ಸ್ಪೆಕ್ಟರ್ ಎಮ್.ಎಸ್. ಹೂಗಾರ ಅವರೇ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದು ಉಪನಗರ ಠಾಣೆಯ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಚೆನ್ನಮ್ಮ ವೃತ್ತದ ಬಳಿಯಲ್ಲಿ ಚೈನು, ಉಂಗುರು, ಫೋನ್ ಹಾಗೂ ಹಣವನ್ನು ದರೋಡೆ ಪ್ರಕರಣ ನಡೆದಿತ್ತು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉಪನಗರ ಠಾಣೆಯ ಪೊಲೀಸರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡು ಆರೋಪಿ ಅರುಣ ಎಂಬಾತನನ್ನು ಬಂಧಿಸಿದ್ದಾರೆ.ಅದರಂತೆ ಹೆಚ್ಚಿನ ವಿಚಾರಣೆ ನಡೆಸಿದ ಪ್ರಕರಣದಲ್ಲಿ ಮತ್ತೆ ಕೆಲವರು ಭಾಗಿ ಯಾಗಿರುವ ಮಾಹಿತಿಯನ್ನು ಅರುಣ್‌ ನೀಡಿದ್ದು

ಆರೋಪಿಯು ಮಾಹಿತಿ ನೀಡುತ್ತೇನೆಂದು ಎಂಟಿಎಸ್ ಕಾಲೋನಿಗೆ ಕರೆದುಕೊಂಡು ಹೋಗಿದ್ದ ಸಮಯದಲ್ಲಿ ಆರೋಪಿ ಅರುಣ್ ಪೊಲೀಸರ ಗಮನವನ್ನು ಬೇರೆಡೆ ಸೆಳೆದು ಪರಾರಿಯಾಗಲು ಯತ್ನಿಸಿದ್ದಾನೆ.ಅಷ್ಟೇ ಅಲ್ಲದೇ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾನೆ

ಈ ವೇಳೆ ಪರಾರಿಯಾಗುತ್ತಿದ್ದ ಆರೋಪಿ ಅರುಣ್ ಕಾಲಿಗೆ ಇನ್ಸ್ಪೆಕ್ಟರ್ ಎಮ್.ಎಸ್.ಹೂಗಾರ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಪರಿಣಾಮ ಆರೋಪಿ ಕಾಲಿಗೆ ಗಾಯವಾಗಿದ್ದು, ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ

ಘಟನೆ ಯಲ್ಲಿ ಉಪನಗರ ಪೊಲೀಸ್ ಠಾಣೆ ಯ ಇಬ್ಬರು ಸಿಬ್ಬಂದಿ ಗಳಿಗೆ ಸಣ್ಣ ಪುಟ್ಟ ಪ್ರಮಾಣ ದಲ್ಲಿ ಗಾಯಗಳಾಗಿದ್ದು ಈ ಒಂದು ಕುರಿತು ಸಧ್ಯ ಪೊಲೀಸ್ ಆಯುಕ್ತ ಶಶಿಕುಮಾರ್ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಮುಂದಿ‌ನ ಕ್ರಮವನ್ನು ಕೈಗೊಂಡಿದ್ದಾರೆ‌.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..

 

 

 

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.