ಚಾಕುವಿನಿಂದ ಇರಿದು ಶಿಕ್ಷಕಿಯ ಕೊಲೆ – ಮನೆಗೆ ನುಗ್ಗಿದ ಮೂವರಿಂದ ಶಿಕ್ಷಕಿ ದಿವ್ಯಶ್ರೀ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ…..

Suddi Sante Desk
ಚಾಕುವಿನಿಂದ ಇರಿದು ಶಿಕ್ಷಕಿಯ ಕೊಲೆ – ಮನೆಗೆ ನುಗ್ಗಿದ ಮೂವರಿಂದ ಶಿಕ್ಷಕಿ ದಿವ್ಯಶ್ರೀ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ…..

ಕೋಲಾರ

ಚಾಕುವಿನಿಂದ ಇರಿದು ಶಿಕ್ಷಕಿಯ ಕೊಲೆ – ಮನೆಗೆ ನುಗ್ಗಿದ ಮೂವರಿಂದ ಶಿಕ್ಷಕಿ ದಿವ್ಯಶ್ರೀ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ…..

ಶಿಕ್ಷಕಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮನೆಯಲ್ಲಿ ಟಿವಿ ವೀಕ್ಷಿಸುತ್ತಾ ಕುಳಿತುಕೊಂಡಿದ್ದ ಸಮಯದಲ್ಲಿ ಮನೆಯೊಳಗೆ ನುಗ್ಗಿದ ಮೂವರು ಹಂತಕರು ಚಾಕುವಿನಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದಾರೆ. ಮುಳಬಾಗಿಲಿನಲ್ಲಿ ಈ ಒಂದು ಘಟನೆ ನಡೆದಿದೆ.ತಾಲ್ಲೂಕಿನ ಮುಡಿಯನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ದಿವ್ಯಶ್ರೀ(46) ಕೊಲೆ ಯಾದ ಶಿಕ್ಷಕಿಯಾಗಿದ್ದಾರೆ.

ಮುಳಬಾಗಿಲು ನಗರದ ಪ್ರತಿಷ್ಠಿತ ಬಡಾವಣೆ ಯಲ್ಲಿ ದಿವ್ಯಶ್ರೀ ಅವರು ಮಗಳೊಂದಿಗೆ ವಾಸವಾಗಿದ್ದರು. ಪತಿ ಪದ್ಮನಾಭಶೆಟ್ಟಿ ಊದು ಬತ್ತಿ ಲೇವಾದೇವಿ ವ್ಯವಹಾರ ನಡೆಸುತ್ತಿದ್ದರಿಂದ ಹೊರಗೆ ಹೋಗಿದ್ದರು.ಇವರ ಮತ್ತೊಬ್ಬ ಮಗ ಪ್ರೇಮ್‌ ವಿದ್ಯಾಭ್ಯಾಸದ ನಿಮಿತ್ತ ಬೇರೆ ಊರಿ ನಲ್ಲಿ ನೆಲೆಸಿದ್ದಾರೆ. ಹಾಗಾಗಿ ಇವರ ಮನೆಯಲ್ಲಿ ದಿವ್ಯಶ್ರೀ ಹಾಗೂ ಪುತ್ರಿ ನಿಶಾ ಮಾತ್ರ ಇದ್ದರು.

ನಿಶಾ ಸಂಜೆ ಮನೆಯ ಮೇಲ್ಬಾಗದ ಕೊಠಡಿ ಯಲ್ಲಿ ಓದುತ್ತಿದ್ದಳು. ನೆಲ ಮಾಳಿಗೆಯ ಮನೆ  ಯಲ್ಲಿ ದಿವ್ಯಶ್ರೀ ಟಿವಿ ವೀಕ್ಷಿಸುತ್ತ ಕುಳಿತಿದ್ದರು. ಆ ವೇಳೆ ಮೂವರು ಹಂತಕರು ಏಕಾಏಕಿ ಮನೆ ಯೊಳಗೆ ನುಗ್ಗಿ ಚಾಕುವಿನಿಂದ ದಿವ್ಯಶ್ರೀ ಅವರ ಕುತ್ತಿಗೆ ಕೊಯ್ದು ಕೊಲೆ ಮಾಡಿ ಪರಾರಿಯಾಗಿ ದ್ದಾರೆ.

ಮನೆಯೊಳಗೆ ಏನೋ ಗಲಾಟೆ ಶಬ್ದವಾಗುತ್ತಿದೆ ಎಂದು ತಿಳಿದು ನಿಶಾ ಕೆಳಗೆ ಇಳಿದು ಬಂದು ನೋಡಿದಾಗ ತಾಯಿ ರಕ್ತದ ಮಡುವಿನಲ್ಲಿ ಇದ್ದದ್ದು ಕಂಡು ಚೀರಾಡಿದ್ದಾರೆ. ನೆರೆಹೊರೆಯ ವರು ಏನಾಯಿತೆಂದು ಇವರ ಮನೆಗೆ ಬಂದು ನೋಡಿ ತಕ್ಷಣ ರಕ್ತದ ಮಡುವಿನಲ್ಲಿ ಬಿದಿದ್ದ ದಿವ್ಯಶ್ರೀ ಅವರನ್ನು ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಜನಭರಿತ ಈ ಬಡಾವಣೆಯಲ್ಲಿ ಶಿಕ್ಷಕಿಯ ಕೊಲೆ ನಡೆದಿರುವುದು ಕಂಡು ಆತಂಕಗೊಂಡಿದ್ದಾರೆ ಸುತ್ತಮುತ್ತಲ ನಿವಾಸಿಗಳು ಭಯಭೀತರಾಗಿ ದ್ದಾರೆ.ಇನ್ನೂ ಸುದ್ದಿ ತಿಳಿದು ಎಸ್‌‍ಪಿ ನಿಖಿಲ್‌, ತಹಸೀಲ್ದಾರ್‌ ವೆಂಕಟಚಲಪತಿ, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ರವಿಶಂಕರ್‌, ಜಗದೀಶ್‌, ಡಿವೈಎಸ್‌‍ಪಿ ನಂದಕುಮಾರ್‌, ನಗರ ಠಾಣೆ ಇನ್ಸ್ಪೆಕ್ಟರ್ ಶಿವಕುಮಾರ್‌, ಗ್ರಾಮಾಂತರ ಠಾಣೆ ಸಿ.ಪಿ.ಐ ಸತೀಶ್‌,

ಪಿಎಸ್‌‍ಐಗಳಾದ ವಿಠಲ್‌ ವೈ ತಳವಾರ್‌, ಮಮತಾ, ನಂಗ್ಲಿ ಠಾಣೆಯ ಪಿಎಸ್‌‍ಐ ಅರ್ಜುನ್‌ ಗೌಡ ಹಾಗೂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿ ಈ ಒಂದು ಕುರಿತಂತೆ ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಕೋಲಾರ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.