ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯ ಆಚರಣೆ ಇಲಾಖೆಯಿಂದ ಹೊರಬಿತ್ತು ಮಹತ್ವದ ಆದೇಶ – ಶಾಲೆಗಳಲ್ಲಿ ಕಡ್ಡಾಯವಾಗಿ ಧ್ವಜಾರೋಹಣ ಮಾಡಿ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜಿಸಲು ಸೂಚನೆ…..

Suddi Sante Desk
ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯ ಆಚರಣೆ ಇಲಾಖೆಯಿಂದ ಹೊರಬಿತ್ತು ಮಹತ್ವದ ಆದೇಶ – ಶಾಲೆಗಳಲ್ಲಿ ಕಡ್ಡಾಯವಾಗಿ ಧ್ವಜಾರೋಹಣ ಮಾಡಿ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜಿಸಲು ಸೂಚನೆ…..

ಬೆಂಗಳೂರು

ಈ ಬಾರಿಯ ನವೆಂಬರ್.1ರ ಕನ್ನಡ ರಾಜ್ಯೋತ್ಸವ ವನ್ನು ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆ ಗಳಲ್ಲಿ ಕಡ್ಡಾಯವಾಗಿ ಆಚರಣೆ ಯೊಂದಿಗೆ ಕನ್ನಡ ಧ್ವಜಾರೋಹಣ ಮಾಡುವುದು ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಈ ಬಗ್ಗೆ ಈಗಾಗಲೇ ರಾಜ್ಯ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಲಾಗಿದೆ

ಡಿಸಿಎಂ ಡಿ.ಕೆ ಶಿವಕುಮಾರ್ ಸೂಚನೆಯಂತೆ, ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ಬಂದು 70 ವರ್ಷಗಳು ತುಂಬಿರುವ ಕಾರಣ ರಾಜ್ಯದ ಎಲ್ಲಾ ಶಾಲೆಗಳಲ್ಲಿ ನವಂಬರ್-1 ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವನ್ನು ಆಚರಿಸಬೇಕು ಮತ್ತು ಈಗಿನ ಪೀಳಿಗೆಗೆ ಕನ್ನಡ ನಾಡಿನ ಸಂಸ್ಕೃತಿ, ಕಲೆ, ಇತಿಹಾಸದ ಬಗ್ಗೆ ಅರಿವು ಮೂಡಿಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯ ಎಂದಿದ್ದಾರೆ.

ಹೀಗಾಗಿ ಪ್ರತಿಯೊಂದು ಸರ್ಕಾರಿ ಅನುದಾನಿತ ಶಾಲೆಗಳು ಹಾಗೂ ಅನುದಾನ ಶಾಲೆಗಳಲ್ಲಿ ಕಡ್ಡಾಯ ವಾಗಿ ಧ್ವಜಾರೋಹಣ ಮಾಡಿ ಸಾಂಸ್ಕೃತಿಕ ಕಾರ್ಯ ಕ್ರಮಗಳನ್ನು ಆಯೋಜಿಸಿ 69ನೇ ಕನ್ನಡ ರಾಜ್ಯೋ ತ್ಸವವನ್ನು ಯಶಸ್ವಿಯಾಗಿಸಬೇಕೆಂದು ಸೂಚಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.