ಸಾರಿಗೆ ನೌಕರರ ಪ್ರತಿಭಟನೆ ಮುಂದೂಡಿಕೆ – ಬೇಡಿಕೆ ಈಡೇರಿಸುವ ಭರವಸೆ ನೀಡಿದ ಸಚಿವರು…..15 ದಿನಗಳಲ್ಲಿ ನೌಕರರ ಬೇಡಿಕೆಗಳ ಕುರಿತು ನಢಯಲಿದೆ ನಿರ್್

Suddi Sante Desk
ಸಾರಿಗೆ ನೌಕರರ ಪ್ರತಿಭಟನೆ ಮುಂದೂಡಿಕೆ – ಬೇಡಿಕೆ ಈಡೇರಿಸುವ ಭರವಸೆ ನೀಡಿದ ಸಚಿವರು…..15 ದಿನಗಳಲ್ಲಿ ನೌಕರರ ಬೇಡಿಕೆಗಳ ಕುರಿತು ನಢಯಲಿದೆ ನಿರ್್

ಬೆಂಗಳೂರು

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಭರವಸೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಮುಷ್ಕರವನ್ನು ಮುಂದೂಡಲಾಗಿದೆ ಹೌದು 2020ರ ಜನವರಿಯಿಂದ 2023ರ ಫೆಬ್ರುವರಿವರೆಗಿನ 38 ತಿಂಗಳ ವೇತನ ಪರಿಷ್ಕರಣೆ ಹಿಂಬಾಕಿಯ ಬಗ್ಗೆ ಮತ್ತು 2024ರ ಜನವರಿಯಿಂದ ವೇತನ ಪರಿಷ್ಕರಣೆ ಬಗ್ಗೆ ಚರ್ಚಿಸಲು 15 ದಿನಗಳಲ್ಲಿ ಸಭೆ ನಡೆಸಲು ಸಚಿವರು ಒಪ್ಪಿಗೆ ಸೂಚಿಸಿದ್ದಾರೆ.

38 ತಿಂಗಳ ವೇತನ ಪರಿಷ್ಕರಣೆ ಹಿಂಬಾಕಿಯ ಅವಧಿ ಯಲ್ಲಿ ನಿವೃತ್ತಿ ಹೊಂದಿದವರಿಗೆ ಅಂತಿಮ ಕ್ಲೇಮ್ಸ್‌ ಹಣ ₹ 226 ಕೋಟಿಯನ್ನು ನವೆಂಬರ್‌ 30ರ ಒಳಗೆ ಬಿಡುಗಡೆ ಮಾಡುವುದಾಗಿ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಆಡಳಿತ ವರ್ಷ ಮತ್ತು ನೌಕರರ ಕೊಡುಗೆ ಆಧಾರದಲ್ಲಿ ಉತ್ತಮ ವೈದ್ಯಕೀಯ ಸೌಲಭ್ಯ ಜಾರಿ ಮಾಡುವ, ಬಾಕಿ ಇರುವ ಅಂತರ ನಿಗಮ ವರ್ಗಾವಣೆ ಗಳ ಬಗ್ಗೆ ಶೀಘ್ರ ಆದೇಶ ನೀಡುವ ಬಗೆಗಿನ ಬೇಡಿಕೆಗೆ ಸ್ಪಂದಿಸಿದ್ದಾರೆ ಎಂದು ಜಂಟಿ ಕ್ರಿಯಾ ಸಮಿತಿ ತಿಳಿಸಿದೆ.

ಸಚಿವರೊಂದಿಗೆ ನಡೆದ ಅಧಿಕಾರಿಗಳು ಮತ್ತು ನೌಕರ ಸಂಘಟನೆಗಳ ತ್ರಿಪಕ್ಷೀಯ ಸಭೆಯಲ್ಲಿ ಕೆಎಸ್‌ಆರ್‌ ಟಿಸಿ ಸ್ಟಾಫ್ ಆಯಂಡ್‌ ವರ್ಕರ್ಸ್‌ ಫೆಡರೇಶನ್‌ ಅಧ್ಯಕ್ಷ ಎಚ್‌.ವಿ. ಅನಂತಸುಬ್ಬರಾವ್‌, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಮಂಡಳಿ ಅಧ್ಯಕ್ಷ ಬಿ. ಜಯದೇವರಾಜೇ ಅರಸು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್‌ (ಸಿಐಟಿಯು) ಅಧ್ಯಕ್ಷ ಎಚ್‌.ಡಿ. ರೇವಪ್ಪ, ಕೆಎಸ್‌ಆರ್‌ ಟಿಸಿ ಎಸ್‌ಸಿ ಆಯಂಡ್‌ ಎಸ್‌ಟಿ ಎಂಪ್ಲಾಯಿಸ್‌ ಯೂನಿಯನ್‌ ಅಧ್ಯಕ್ಷ ವೆಂಕಟರಮಣಪ್ಪ,

ಕೆಎಸ್‌ಆರ್‌ಟಿಸಿ ಪರಿಶಿಷ್ಟ ಜಾತಿ/ಪ‍ರಿಶಿಷ್ಟ ಪಂಗಡದ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್‌.ಆರ್. ಅದರಗುಂಚಿ, ಕೆಎಸ್‌ ಆರ್‌ಟಿಸಿ ನೌಕರರ ಸಂಘದ ಅಧ್ಯಕ್ಷ ಜಗದೀಶ್‌ ಭಾಗವಹಿಸಿದ್ದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.