DDPI NH ನಾಗೂರ ಅಮಾನತು – ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿಯವರಿಂದ ಅಮಾನತು…..

Suddi Sante Desk
DDPI NH ನಾಗೂರ ಅಮಾನತು – ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿಯವರಿಂದ ಅಮಾನತು…..

ವಿಜಯಪುರ

ಕರ್ತವ್ಯಲೋಪ ಹಿನ್ನೆಲೆ ವಿಜಯಪುರ ಡಿಡಿಪಿಐ ಎನ್.ಎಚ್. ನಾಗೂರ ಅವರನ್ನು ಅಮಾನತು ಮಾಡಲಾಗಿದೆ ಹೌದು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.ವಿಜಯಪುರ ಜಿಲ್ಲೆಯಲ್ಲಿ 2024-25ರಲ್ಲಿ ಹೊಸ ಶಾಲೆಯ ನೋಂದಣಿ ಪ್ರಕ್ರಿಯೆಯಲ್ಲಿ ನಿಯಮಬಾಹಿರ ಅನುಮೋದನೆ‌ ನೀಡಿದ್ದಾರೆ ಎಂಬ ಹಿನ್ನೆಲೆಯಲ್ಲಿ ಡಿಡಿಪಿಐ ನಾಗೂರ ವಿರುದ್ಧ ಶಿಸ್ತು ಕ್ರಮ ಬಾಕಿ ಇರಿಸಿ,

ತಕ್ಷಣದಿಂದ ಜಾರಿಗೆ ಬರುವಂತೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅಮಾನತು ಆದೇಶ ಹೊರಡಿಸಿದ್ದಾರೆ.ಈ ಹಿಂದೆ ಕೂಡಾ ಇವರ ಮೇಲೆ ಸಾಕಷ್ಟು ಪ್ರಮಾಣದಲ್ಲಿ ಆರೋಪಗಳು ಕೇಳಿ ಬಂದಿದ್ದವು ಇದರ ನಡುವೆ ಸಧ್ಯ ಈಗ ಈ ಹಿಂದಿನ ಆರೋಪದ ಮೇಲೆ ಅಮಾನತು ಮಾಡಲಾಗಿದೆ

ಸುದ್ದಿ ಸಂತೆ ನ್ಯೂಸ್ ವಿಜಯಪುರ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.