ಬೀದರ –
ಈಗಾಗಲೇ ಹಂತ ಹಂತವಾಗಿ ರಾಜ್ಯದಲ್ಲಿ ಶಾಲೆಗಳು ಆರಂಭಗೊಂಡಿದ್ದು ಬಹುತೇಕ ಪ್ರಮಾಣದಲ್ಲಿ ತರಗತಿಗಳು ನಡೆಯುತ್ತಿದ್ದು ಇದರೊಂದಿಗೆ ಶಿಕ್ಷಕರ ವರ್ಗಾವಣೆ ಶಿಕ್ಷಕರಿಗೆ ದೊಡ್ಡ ಪ್ರಮಾಣದಲ್ಲಿ ತಲೆನೋವಾಗಿದ್ದು ಇದರ ಬೆನ್ನಲ್ಲೇ ಈಗ ಮತ್ತೊಂದು ಜವಾಬ್ದಾರಿಯನ್ನು ಶಿಕ್ಷಣ ಸಚಿವರು ಶಿಕ್ಷಕರಿಗೆ ನೀಡಿದ್ದಾರೆ.ಹೌದು ಕೋವಿಡ್ ನಿಯಂತ್ರಣ ಹಿನ್ನಲೆ ೧ ರಿಂದ ೫ ರವರೆಗೆ ಭೌತಿಕ ತರಗತಿಗಳನ್ನು ಆರಂಭಿಸಲಾಗಿದೆ.ಮೊದಲ ದಿನಕ್ಕಿಂತ ಈಗ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಕೂಡಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಶಾಲೆಯಿಂದ ದೂರ ಉಳಿದ ಮಕ್ಕಳನ್ನು ಮರಳಿ ಕರೆತ ರುವ ಜವಾಬ್ದಾರಿಯನ್ನು ಶಿಕ್ಷಕರಿಗೆ ವಹಿಸಲಾಗಿದೆ.
ಇನ್ನೂ ಆರಂಭದಲ್ಲಿ ಸೇತು ಬಂಧು ಕಾರ್ಯಕ್ರಮ ಹೆಚ್ಚು ನಡೆಸುವುದು ಕಲಿಕೆಯಲ್ಲಿ ಹಿಂದುಳಿದ ಪ್ರತಿ ಮಗುವಿನಲ್ಲಿ ಶಕ್ತಿ ತುಂಬುವ ನಿಟ್ಟಿನಲ್ಲಿ ಶಿಕ್ಷಕರು ಕೆಲಸ ಮಾಡಬೇಕು.ಈ ಸಂಬಂಧ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಈ ಒಂದು ಸಮಯದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಮಾಜಿ ಶಾಸಕ ಪ್ರಕಾಶ ಖಂಡ್ರೆ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.