ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು – ಹಣ ತಗೆದುಕೊಳ್ಳುವಾಗ ಟ್ರ್ಯಾಪ್…..

Suddi Sante Desk
ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು – ಹಣ ತಗೆದುಕೊಳ್ಳುವಾಗ ಟ್ರ್ಯಾಪ್…..

ಶಿವಮೊಗ್ಗ

ಗುತ್ತಿಗೆದಾರರೊಬ್ಬರಿಂದ ಲಂಚವನ್ಮು ತೆಗೆದುಕೊಳ್ಳು ವಾಗ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ದಲ್ಲಿ ನಡೆದಿದೆ.ಹಣ ಮಂಜೂರು ಮಾಡಲು 1.20 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ.

ಭದ್ರಾವತಿ ತಾಲೂಕು ಗೋಂದಿಯ ಭದ್ರಾ ಬಲದಂಡೆ ನಾಲೆಯ ಸಿಲ್ಟ್‌ ತೆಗೆಯುವ ಕಾಮಗಾರಿಯು 2024ರ ಜನವರಿಯಲ್ಲಿ ಪೂರ್ಣಗೊಂಡಿತ್ತು.ಆದರೆ ಟೆಂಡರ್‌ ಹಣ 9.16 ಲಕ್ಷ ರೂ. ಗುತ್ತಿಗೆದಾರರಿಗೆ ಮಂಜೂರಾಗಿ ರಲಿಲ್ಲ. ಹಾಗಾಗಿ ಗುತ್ತಿಗೆದಾರ ವಿ.ರವಿ ಹಲವು ಬಾರಿ ಹಣ ಮಂಜೂರಾತಿಗಾಗಿ ಮನವಿ ಮಾಡಿದ್ದರು. ನೀರಾವರಿ ನಿಗಮದ ಸೆಕ್ಷನ್‌ ಆಫೀಸರ್‌ ಕೊಟ್ರಪ್ಪ ಬಿಲ್‌ ಮಂಜೂರಾಗಬೇಕಿದ್ದರೆ 1.20 ಲಕ್ಷ ರೂ. ಹಣ ನೀಡು ವಂತೆ ಬೇಡಿಕೆ ಇಟ್ಟಿದ್ದರು

ಸೆಕ್ಷನ್‌ ಆಫೀಸರ್‌ ಕೊಟ್ರಪ್ಪ ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಗುತ್ತಿಗೆದಾರ ರವಿ ಅವರು ಲೋಕಾ ಯುಕ್ತಕ್ಕೆ ದೂರು ನೀಡಿದ್ದರು. ಇವತ್ತು ಬಿಆರ್‌ಪಿ ವ್ಯಾಪ್ತಿಯ ಡಿ.ಬಿ.ಹಳ್ಳಿಯ ಕಚೇರಿಯಲ್ಲಿ ಗುತ್ತಿಗೆದಾರ ರವಿ ಅವರಿಂದ 1.20 ಲಕ್ಷ ರೂ. ಲಂಚದ ಹಣ ಪಡೆಯುತ್ತಿದ್ದ ಸಂದರ್ಭ ಸೆಕ್ಷನ್‌ ಆಫೀಸರ್‌ ಕೊಟ್ರಪ್ಪ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರೆಡ್‌ ಹ್ಯಾಂಡ್‌ ಆಗಿ ಬಂಧಿಸಿದ್ದಾರೆ. ಕಚೇರಿಯ ಲೈಟ್‌ ಮಜದೂರ್‌ ಅರವಿಂದ್‌ ಎಂಬಾತನನ್ನು ಬಂಧಿಸ ಲಾಗಿದೆ

ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.