ರಾಜ್ಯ ಸರ್ಕಾರಿ ನೌಕರರೇ ಕಚೇರಿ ಸಮಯದಲ್ಲಿ ಈ ನಿಯಮಗಳನ್ನು ಕಡ್ಡಾಯ – ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ…

Suddi Sante Desk
ರಾಜ್ಯ ಸರ್ಕಾರಿ ನೌಕರರೇ ಕಚೇರಿ ಸಮಯದಲ್ಲಿ ಈ ನಿಯಮಗಳನ್ನು ಕಡ್ಡಾಯ – ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ…

ಬೆಂಗಳೂರು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿ ಗಳು ಸಮಯ ಪಾಲನೆ ಮಾಡದಿರುವುದು, ಚಲನ-ವಲನ ವಹಿಯನ್ನು ನಿರ್ವಹಿಸದಿರುವುದು, ಕರ್ತವ್ಯದ ಅವಧಿಯಲ್ಲಿ ಗುರುತಿನ ಚೀಟಿಯನ್ನು ಧರಿಸದಿರು ವುದು ಅಧಿಕಾರಿ,ಸಿಬ್ಬಂದಿಗಳ ಹೆಸರು ಮತ್ತು ಹುದ್ದೆಯ ನಾಮ ಫಲಕಗಳನ್ನು ಅಳವಡಿಸದಿರುವ ಬಗ್ಗೆ ದೂರುಗಳು ಸ್ವೀಕೃತವಾಗಿರುವುದರಿಂದ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಕೆಳಕಂಡ ಸೂಚನೆಗಳನ್ನು ಪಾಲಿಸಲು ಸೂಚಿಸಿದೆ.

ನಿಯಮಗಳ ಪ್ರಕಾರ ಕಛೇರಿಗೆ ಬರುವ ವೇಳೆ ಹಾಗೂ ಕಛೇರಿಯಿಂದ ಹೊರಡುವ ವೇಳೆಯನ್ನು ಪಾಲನೆ ಮಾಡುವುದು. ಕಛೇರಿ ಅವಧಿ ಪೂರ್ಣವಾಗುವವರೆಗೆ ತಮಗೆ ನಿಗದಿಪಡಿಸಿದ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸತಕ್ಕದ್ದು.ಕಛೇರಿ ಸಮಯದಲ್ಲಿ ನೌಕರರು ಅಧಿಕಾರಿಗಳು ಕಛೇರಿ ಕೆಲಸದ ನಿಮಿತ್ತ ತೆರಳಬೇಕಾ ಗಿದ್ದಲ್ಲಿ, ಚಲನ-ವಲನ ವಹಿಯಲ್ಲಿ ಸಕಾರಣವನ್ನು ಪೂರ್ವಾನುಮತಿಯನ್ನು ಪಡೆಯತಕ್ಕದ್ದು. ನಮೂದಿಸಿ, ಮೇಲಾಧಿಕಾರಿಗಳಿಗೆ ಮಾಹಿತಿ ನೀಡುವುದು

ಕರ್ತವ್ಯದ ಅವಧಿಯಲ್ಲಿ ಅಧಿಕಾರಿಗಳು/ಸಿಬ್ಬಂದಿಗಳು ಕಡ್ಡಾಯವಾಗಿ ಇಲಾಖೆಯಿಂದ ಪಡೆದ ಗುರುತಿನ ಚೀಟಿಯನ್ನು ಕೊರಳಿಗೆ ಧರಿಸುವುದು.ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ/ ಅಧಿಕಾರಿಗಳು ತಾವು ಕುಳಿತು ಕರ್ತವ್ಯ ನಿರ್ವಹಿಸುವ ಮೇಜಿನ ಮೇಲೆ ಅಧಿಕಾರಿ/ ಸಿಬ್ಬಂದಿಗಳು ಹೆಸರು ಮತ್ತು ಹುದ್ದೆ ಸೂಚಿಸುವ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳತಕ್ಕದ್ದು.

ಹಿರಿಯ ನಾಗರಿಕರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದು.ಯಾವುದೇ ರೀತಿಯ ಪತ್ರಗಳು ಬಂದಾಗ ಕಛೇರಿ ಕೈಪಿಡಿಯನ್ವಯ ಕಾರ್ಯ ನಿರ್ವಹಿಸುವುದು.ಕಡತಗಳ ಚಲನವಲನ ಗಳ ಬಗ್ಗೆ ನಿಗಾವಹಿಸುವುದು. ಇ-ಆಫೀಸ್ ಲಭ್ಯ ವಿರುವ ಕಡೆ ಕಡತ/ಸ್ವೀಕೃತಿಪತ್ರ ಪರಿಶೀಲಿಸಿ ತುರ್ತಾಗಿ ನಿಯಮಗಳನ್ನಯ ವಿಲೇವಾರಿ ಮಾಡುವುದು.

ಈ ಮೇಲಿನ ನಿಯಮಗಳನ್ನು ಪಾಲಿಸದಿದ್ದಲ್ಲಿ CCA ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಉಲ್ಲೇಖ ಮಾಡಿ ಆದೇಶವನ್ನು ಮಾಡಲಾಗಿದೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.