ಬೆಂಗಳೂರು –
ರಾಜ್ಯದ ಶಿಕ್ಷಕರು ತಮ್ಮ ಜ್ವಲಂತ ಸಮಸ್ಯೆಗಳ ಕುರಿತು ಚರ್ಚೆ ಮಾಡಿ ಅಂತಿಮ ರೂಪರೇಷೆಗಳನ್ನು ಕಂಡುಕೊಳ್ಳು ವ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ನೌಕರರ ರಾಜ್ಯಾಧ್ಯಕ್ಷ ಷಡಕ್ಷಾರಿ ಅವರು ಇಂದು ಮಹತ್ವದ ಸಭೆಯನ್ನು ಕರೆದಿದ್ದಾರೆ.ಈಗಾಗಲೇ ಈ ಒಂದು ಸಭೆಯಲ್ಲಿ ಪಾಲ್ಗೊಳ್ಳಲು ರಾಜ್ಯದ ಮೂಲೆ ಮೂಲೆಗಳಿಂದ ಶಿಕ್ಷಕರು ಬೆಂಗಳೂರಿಗೆ ಬಂದಿದ್ದು ಇನ್ನೂ ಬರುತ್ತಿದ್ದಾರೆ ಇನ್ನೂ ಇವೆಲ್ಲದರ ನಡುವೆ ಶಿಕ್ಷಕರ ಶಕ್ತಿ ಪ್ರದರ್ಶನ ಮುನ್ನವೇ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.ಹೌದು ಬೆಂಗಳೂರಿನಲ್ಲಿ ಮನೆ ಕಟ್ಟಿಸುವ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದಾರೆ.ಸರ್ಕಾರಿ ನೌಕರರಿಗೆ ರಿಯಾಯಿತಿ ದರದಲ್ಲಿ ಮನೆ ಹಂಚಿಕೆ ಮಾಡಲು ಸಿಎಂ ಒಪ್ಪಿಗೆ ನೀಡಿದ್ದಾರೆ
ಬೆಂಗಳೂರು ನಗರದಲ್ಲಿ ಅಪಾರ್ಟ್ ಮೆಂಟ್ ನಿರ್ಮಿಸಿ ಸರ್ಕಾರಿ ನೌಕರರಿಗೆ ರಿಯಾಯಿತಿ ದರಲ್ಲಿ ಹಂಚಿಕೆ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಒಪ್ಪಿಗೆ ನೀಡಿದ್ದಾರೆ ಈ ಒಂದು ವಿಚಾರವನ್ನು ಸ್ವತಃ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ತಿಳಿಸಿದ್ದಾರೆ.
ಈ ಮೂಲಕ ಬೆಂಗಳೂರು ನಗರದಲ್ಲಿ ಮನೆ ಕಟ್ಟುವ ಕನಸು ಹೊಂದಿದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದಂತಾಗಿದ್ದು ಇನ್ನೂ ಇತ್ತ ಇಂದು ನಗರದಲ್ಲಿ ರಾಜ್ಯದ ಶಿಕ್ಷಕರ ಶಕ್ತಿ ಪ್ರದರ್ಶನ ನಡೆಯಲಿದ್ದು ಸಭೆಯಲ್ಲಿ ಯಾವ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ ಎಂಬೊಂದನ್ನು ಕಾದು ನೋಡಬೇಕು
ವರದಿ – ವೆಂಕಟೇಶ್ ಜೊತೆ ಗೋಪ್ಯಾ ಸುದ್ದಿ ಸಂತೆ ಡೆಸ್ಕ್