ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಚತೆ ಮಾಡಿಸುವವರಿಗೆ ಎಚ್ಚರಿಕೆ ನೀಡಿದ ಶಿಕ್ಷಣ ಸಚಿವರು – ಶಿಕ್ಷಕರಿಗೆ ಸಚಿವರು ಹೇಳಿದ್ದೇನು ಗೊತ್ತಾ…..

Suddi Sante Desk
ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಚತೆ ಮಾಡಿಸುವವರಿಗೆ ಎಚ್ಚರಿಕೆ ನೀಡಿದ ಶಿಕ್ಷಣ ಸಚಿವರು – ಶಿಕ್ಷಕರಿಗೆ ಸಚಿವರು ಹೇಳಿದ್ದೇನು ಗೊತ್ತಾ…..

ಬೆಂಗಳೂರು

ಸರಕಾರಿ ಶಾಲೆಗಳಲ್ಲಿ ಮಕ್ಕಳಿಂದ ಕಸ ಗುಡಿಸುವ ಮತ್ತು ಶೌಚಾಲಯಗಳನ್ನು ಶುಚಿಗೊಳಿಸುವ ಪ್ರಕರಣಗಳು ವರದಿಯಾದರೆ ಕೂಡಲೇ ಕಠಿಣ ಕ್ರಮ ಜರುಗಿಸಲಾಗು  ವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಮಕ್ಕಳಿಂದ ಶಾಲಾ ಆವರಣ ಮತ್ತು ಶೌಚಾಲಯ ಶುಚಿಮಾಡಿಸುವ ಪ್ರಕರಣ ನಡೆಯುತ್ತಿಲ್ಲ.

ಒಂದು ವೇಳೆ ಅಂತಹ ಘಟನೆ ನಡೆದರೆ ಸಂಬಂಧ ಪಟ್ಟವರ ವಿರುದ್ಧ ಕೂಡಲೇ ಕ್ರಮ ಜರುಗಿಸಲಾಗುತ್ತದೆ ಎಂದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲೆ ಗಳ ನಿರ್ವಹಣೆಗಾಗಿ ನೀಡುತ್ತಿದ್ದ ಹಣದ ಮೊತ್ತವನ್ನು ದ್ವಿಗುಣಗೊಳಿಸಿದ್ದಾರೆ.ಅಲ್ಲದೆ, ಮಕ್ಕಳಿಂದ ಶುಚಿಗೊಳಿ ಸುವ ಪ್ರಕರಣ ಗಮನಕ್ಕೆ ಬಂದರೆ ಮರುಕ್ಷಣವೇ ಕಾನೂನು ಕ್ರಮ ಜರುಗಿಸಲಾಗುವುದು

ಅದನ್ನೆಲ್ಲ ನೋಡಿಕೊಳ್ಳುವ ಜವಾಬ್ದಾರಿಯನ್ನು ಶಾಲಾ ಸುಧಾರಣಾ ಸಮಿತಿಗಳಿಗೆ ವಹಿಸಲಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು……

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.