ರಾಜ್ಯ ಸರ್ಕಾರಿ ನೌಕರರ ಬೇಡಿಕೆಗೆ ಸ್ಪಂದಿಸಿದ ರಾಜ್ಯ ಸರ್ಕಾರ – ರಾಜ್ಯಾಧ್ಯಕ್ಷ ಷಡಾಕ್ಷರಿಯವರ ಮನವಿಗೆ ಸ್ಪಂದಿಸಿ ಆದೇಶ ಮಾಡಿದ ರಾಜ್ಯ ಸರ್ಕಾರ…..

Suddi Sante Desk
ರಾಜ್ಯ ಸರ್ಕಾರಿ ನೌಕರರ ಬೇಡಿಕೆಗೆ ಸ್ಪಂದಿಸಿದ ರಾಜ್ಯ ಸರ್ಕಾರ – ರಾಜ್ಯಾಧ್ಯಕ್ಷ ಷಡಾಕ್ಷರಿಯವರ ಮನವಿಗೆ ಸ್ಪಂದಿಸಿ ಆದೇಶ ಮಾಡಿದ ರಾಜ್ಯ ಸರ್ಕಾರ…..

ಬೆಂಗಳೂರು

ಕರ್ನಾಟಕದಲ್ಲಿ ಈ ಬಾರಿ ಬಿಸಲಿನ ತಾಪಮಾನವೂ ಕೂಡ ಹೆಚ್ಚಾಗಿದೆ.  ಬೇಸಿಗೆಯ ಅವಧಿಯಲ್ಲಿ ಮಧ್ಯಾಹ್ನದ ನಂತರ ಕೆಲಸ ಮಾಡುವುದು ಕಷ್ಟಸಾಧ್ಯ ವಾಗಲಿದ್ದು, ನೌಕರರಿಗೆ ಅನಾರೋಗ್ಯವೂ ಕಾಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು ಮತ್ತು ಸರ್ಕಾರಿ ಸೇವೆ ಪಡೆಯಲು ಬರುವ ಸಾರ್ವಜನಿಕ ರರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬೇಸಿಗೆಯ ತಿಂಗಳಾದ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ಅವಧಿ  ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ರಾಜ್ಯದ ಅತ್ಯಂತ ಬಿಸಿಲು ಹೆಚ್ಚಾಗಿರುವ ಬಯಲು ಸೀಮೆಯ ಜಿಲ್ಲೆಗಳಾದ ಕಲ್ಯಾಣ ಕರ್ನಾಟಕದ 7 ಜಿಲ್ಲೆ ಗಳು ಹಾಗೂ ಕಿತ್ತೂರು ಕರ್ನಾಟಕದ 2 ಜಿಲ್ಲೆಗಳು ಸೇರಿದಂತೆ ಒಟ್ಟು 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಅವಧಿಯನ್ನು ಬದಲಾವಣೆ ಮಾಡಲಾಗಿದೆ. ಎಲ್ಲಾ ಸರ್ಕಾರಿ ನೌಕರರು ಹಾಗೂ ಸರ್ಕಾರಿ ಸೇವೆ ಪಡೆಯಲು ಬರುವ ಸಾರ್ವಜನಿಕರು ಉರಿ ಬಿಸಿಲು, ಹೆಚ್ಚಿದ ತಾಪಮಾನ ಪರಿಣಾಮದಿಂದ ತಪ್ಪಿಸಿಕೊಳ್ಳಲು ಏಪ್ರೀಲ್‌, ಮೇ ತಿಂಗಳು ಕೆಲಸದ ಅವಧಿಯನ್ನು ರಾಜ್ಯ ಸರ್ಕಾರ ಬದಲಾಯಿಸಲಾಗಿದೆ.

ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್‌, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಹಾಗೂ ಯಾದಗಿರಿ ಜಿಲ್ಲೆಗಳು ಹಾಗೂ ಕಿತ್ತೂರು ಕರ್ನಾಕದ (ಬೆಳಗಾವಿ ವಿಭಾಗ) ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಈ ಬದಲಾವಣೆ ಅವಧಿ ಅನ್ವಯವಾಗಲಿದೆ. ಈ ಎರಡು ತಿಂಗಳು ಅವಧಿಯಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಬೆಳಗಿನ 8 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕೆಲಸದ ಅವಧಿ ನಿಗದಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕಳೆದ ಹಲವು ದಶಕಗಳಿಂದ ಬೇಸಿಗೆಯ ಕಚೇರಿ ಸಮಯದಲ್ಲಿ ಬದಲಾವಣೆ ಇತ್ತು. ಆದಾಗ್ಯೂ ಕಳೆದ 2 ವರ್ಷದಿಂದ ಎಲೆಕ್ಷನ್‌ ಹಾಗೂ ಇತರೆ ಕಾರಣಗಳಿಂದಾಗಿ ಸರಕಾರ ಈ ಸವಲತ್ತು ನೀಡಿರಲಿಲ್ಲ. ಇದೀಗ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರು ಸಮಯದ ಬದಲಾವಣೆಗೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿ ಸರ್ಕಾರದಿಂದ ಕಚೇರಿ ಕೆಲಸದ ಸಮಯದಲ್ಲಿ ಬದಲಾವಣೆ ಮಾಡಿದೆ.

ಈಗಾಗಲೇ ಕಲಬುರಗಿಯಲ್ಲಿ ಬೇಸಿಗೆಯ ಅತ್ಯಧಿಕ ತಾಪಮಾನ 42.8 ಡಿಗ್ರಿ ಸೆಲ್ಸಿಯಸ್ ದಾಖಲು ಆಗಿದೆ. ಜೊತೆಗೆ, ಕಲ್ಯಾಣ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ತಾಪಮಾನ ಕಳೆದ 15 ದಿನದಿಂದ ಸರಾಸರಿ 41 ಡಿಗ್ರಿ ದಾಖಲು ಆಗುತ್ತಿದೆ. ಹೀಗಾಗಿ, ಕಚೇರಿ ಕೆಲಸದ ಸಮಯ ಬದಲಾವಣೆಯಿಂದಾಗಿ ಸರಕಾರಿ ನೌಕರರು, ಕಚೇರಿ ಕೆಲಸಕ್ಕೆ ಬರುವ ಸಾರ್ವಜನಿಕರು ಇಬ್ಬರಿಗೂ ಅನುಕೂಲ ಆಗಲಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.