ಬೆಂಗಳೂರು –
ಕಾನ್ಸ್ಟೇಬಲ್ ರೊಬ್ಬರು ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಹೌದು ನಗರದ ಲಾಡ್ಜ್ ವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂ ರಿನ ಉಪ್ಪಾರಪೇಟೆಯಲ್ಲಿ ಈ ಒಂದು ಘಟನೆ ನಡೆದಿದೆ
ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಕಾರ್ಯ ನಿರ್ವಹಿ ಸುತ್ತಿದ್ದ ಕಾನ್ಸ್ ಟೇಬಲ್ ರಂಗನಾಥ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿರುವ ಪೊಲೀಸ್ ಪೇದೆಯಾಗಿದ್ದಾರೆ. ಉಪ್ಪಾರಪೇಟೆಯಲ್ಲಿನ ಖಾಸಗಿ ಲಾಡ್ಜ್ ನ ರೂಂ ಒಂದ ರಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.