ಸಮರ್ಪಕವಾಗಿ ಕುಡಿಯುವ ನೀರಿವ ವ್ಯವಸ್ಥೆಗೆ ಸೂಚನೆ ನೀಡಿದ ಡಾ ಈಶ್ವರ ಉಳ್ಳಾಗಡ್ಡಿ – ಪ್ರಗತಿ ಪರಿಶೀಲನಾಹ ಸಭೆಯಲ್ಲಿ ಸೂಚನೆ ಸಮಸ್ಯೆ ಕಂಡು ಬಂದರೆ ಕೂಡಲೇ ಗಮನಕ್ಕೆ ತಗೆದುಕೊಂಡು ಬರಲು ಸೂಚನೆ…..

Suddi Sante Desk
ಸಮರ್ಪಕವಾಗಿ ಕುಡಿಯುವ ನೀರಿವ ವ್ಯವಸ್ಥೆಗೆ ಸೂಚನೆ ನೀಡಿದ ಡಾ ಈಶ್ವರ ಉಳ್ಳಾಗಡ್ಡಿ – ಪ್ರಗತಿ ಪರಿಶೀಲನಾಹ ಸಭೆಯಲ್ಲಿ ಸೂಚನೆ ಸಮಸ್ಯೆ ಕಂಡು ಬಂದರೆ ಕೂಡಲೇ ಗಮನಕ್ಕೆ ತಗೆದುಕೊಂಡು ಬರಲು ಸೂಚನೆ…..

ಅಳ್ನಾವರ

ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಸರಬ ರಾಜು ಮಾಡಬೇಕು ಸಮಸ್ಯೆ ಎದುರಾದರೆ ತಕ್ಷಣ ಮೇಲಧಿಕಾರಿಗಳ ಗಮನಕ್ಕೆ ತರಬೇಕು. ಮುಂಜಾಗ್ರತಾ ಕ್ರಮವಾಗಿ ಖಾಸಗಿ ಕೊಳವೆಬಾವಿಗಳನ್ನು ಗುರುತಿ ಸಬೇಕು ಎಂದು ತಾಲ್ಲೂಕು ನೋಡಲ್ ಅಧಿಕಾರಿ ಡಾ ಈಶ್ವರ ಉಳ್ಳಾಗಡ್ಡಿ ಹೇಳಿದರು.ಇಲ್ಲಿನ ಪಟ್ಟಣ ಪಂಚಾಯಿತಿ ಸಭಾ ಭವನದಲ್ಲಿ ಗುರುವಾರ ನಡೆದ ತಾಲ್ಲೂಕುಮಟ್ಟದ ವಿವಿದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ವರ್ಷ ತೊಂದರೆಯಾದ ಗ್ರಾಮಗಳಲ್ಲಿ ಹೆಚ್ಚು ಎಚ್ಚರ ವಹಿಸಬೇಕು. ಜಾನುವಾರುಗಳಿಗೆ ನೀರು ಹಾಗೂ ಮೇವಿನ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.ಕಡಬಗಟ್ಟಿ ಗ್ರಾಮದಲ್ಲಿ ನೀರಿನ ಸಮಸ್ಯೆ ನೀಗಿಸಲು ಹೊಸದಾಗಿ ಕೊರೆದ ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವಿದ್ಯುತ್ ಪರಿವರ್ತಕ ಅಳವಡಿಸಬೇಕು ಎಂದು ಪಿಡಿಒ ಆನಂದ ಪಾಟೀಲ ತಿಳಿಸಿದರು.

ತಾಲ್ಲೂಕಿನಲ್ಲಿ ಒಂಬತ್ತು ಸಾವಿರಕ್ಕೂ ಹೆಚ್ಚು ಜಾನುವಾರುಗಳಿದ್ದು, ಸದ್ಯ ಮೇವಿನ ಸಂಗ್ರಹ ಸಮರ್ಪಕವಾಗಿದೆ ಎಂದು ಪಶು ಸಂಗೋಪನಾ ಇಲಾಖೆ ಅಧಿಕಾರಿ ಮಾಹಿತಿ ನೀಡಿದರು.

ವಿದ್ಯುತ್ ಸರಬರಾಜು, ಜಾತಿ ಗಣತಿ ಪ್ರಗತಿ, ಸರ್ಕಾರಿ ಆಸ್ಪತ್ರೆ ಸೇವೆ ಸೇರಿದಂತೆ ವಿವಿದ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಸಭೆಗೆ ಗೈರಾದ ಹಾಗೂ ಕಿರಿಯ ಅಧಿಕಾರಿಗಳನ್ನು ಕಳುಹಿಸಿದವರಿಗೆ ಕಾರಣ ಕೇಳಿ ನೋಟಿಸ್ ನೀಡಲು ತಿಳಿಸಲಾಯಿತು.

ಟಿಎಚ್‍ಒ ಡಾ. ತನುಜಾ ಮಾತನಾಡಿ, ಆರು ವರ್ಷ ಗಳಿಂದ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಂಬಿಬಿಎಸ್ ವೈದ್ಯರ ಸೇವೆ ದೊರೆತಿಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಇದೆ ಎಂದು ತಿಳಿಸಿದರು

ಮುಂದಿನ ಸಭೆಗೆ ಎಲ್ಲ ಇಲಾಖೆಯ ಹಿರಿಯ ಅಧಿಕಾರಿ ಗಳು ಖುದ್ದಾಗಿ ಹಾಜರಿರಬೇಕು ಸರ್ಕಾರಿ ಸೇವೆಗಾಗಿ ಸಾರ್ವಜನಿಕರು ಅಲೆದಾಡಬಾರದು. ಜನರಿಗೆ ಮೂಲ ಸೌಕರ್ಯ ಒದಗಿಸಲು ಸದಾ ಸಿದ್ಧವಾಗಿರಬೇಕು ಎಂದು ಅಧಿಕಾರಿಗಳಿಗೆ ಡಾ ಈಶ್ವರ ಉಳ್ಳಾಗಡ್ಡಿ ಸೂಚಿಸಿದರು.

ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ, ತಾಲ್ಲೂಕು ಪಂಚಾಯಿತಿ ಇಒ ಪ್ರಶಾಂತ ತುರ್ಕಾಣಿ, ಹಳಿಯಾಳ ಬಸ್ ಡಿಪೊ ವ್ಯವಸ್ಥಾಪಕ ಆರ್.ಎಸ್.ರೂಗಿ, ನೀರಾವರಿ ಇಲಾಖೆ ಎಂಜಿನಿಯರ್‌ ರವಿಚಂದ್ರ ಪಾಟೀಲ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪ್ರಕಾಶ ಮಗದುಮ್ ಇದ್ದರು.

ಇದೇ ವೇಳೆ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಟಿ ನೀಡಿದ ಈಶ್ವರ ಉಳ್ಳಾಗಡ್ಡಿ, ಅಲ್ಲಿನ ವ್ಯವಸ್ಥೆ ಬಗ್ಗೆ ಪರಿಶೀಲಿಸಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಮತ್ತು ರೋಗಿ ಗಳಿಗೆ ಉತ್ತಮ ಸೇವೆ ನೀಡಬೇಕು ಎಂದು ವೈದ್ಯರಿಗೆ ಸೂಚಿಸಿದರು.

ಸುದ್ದಿ ಸಂತೆ ನ್ಯೂಸ್ ಅಳ್ನಾವರ…..

 

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.