ಹೊಸಪೇಟೆ (ವಿಜಯನಗರ) –
ಮುಂಬಡ್ತಿಗೆ ಲಂಚ,ಪಿಂಚಣಿಗೆ ಕಮಿಷನ್ ಕೇಳಲಾಗುತ್ತಿದೆ ಎಂಬ ವಿಚಾರ ಕುರಿತು ವಿಜಯನಗರ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕರು ಸಿಡಿದೆದ್ದಿದ್ದಾರೆ. ಹೌದು ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಆಗ್ರಹಿಸಿ ಅಧ್ಯಾಪಕರ ಸಂಘ ಹಾಗೂ ಬೋಧಕೇತರ ನೌಕರರ ಸಂಘದವರು ಕುಲಪತಿ ಕಚೇರಿ ಎದುರು ಧರಣಿ ನಡೆಸಿದರು.ಕುಲಪತಿ ಪ್ರೊ. ಸ.ಚಿ. ರಮೇಶ, ಕುಲಸಚಿವ ಪ್ರೊ.ಎ.ಸುಬ್ಬಣ್ಣ ರೈ, ಹಣಕಾಸು ಅಧಿಕಾರಿ ರಮೇಶ ನಾಯ್ಕ ಅವರನ್ನು ತರಾಟೆಗೆ ತೆಗೆದು ಕೊಂಡರು ಈ ವೇಳೆ ಎರಡೂ ಕಡೆಯವರ ನಡುವೆ ಮಾತಿನ ಚಕಮಕಿ ನಡೆಯಿತು.ಪೊಲೀಸರು ಮಧ್ಯ ಪ್ರವೇಶಿಸಿ ವಾತಾವರಣ ತಿಳಿಗೊಳಿಸಿದರು.
ಬಡ್ತಿ ಕೊಡಲು ಲಂಚ,ಪಿಂಚಣಿ ಬಿಡುಗಡೆಗೆ ಕಮಿಷನ್ ಕೇಳಲಾಗುತ್ತಿದೆ. ಸಂಶೋಧನಾ ವಿದ್ಯಾರ್ಥಿಗಳ ಕೊಲೊಕ್ವಿ ಯಂಗೆ ₹50 ಸಾವಿರ ಬೇಡಿಕೆ,ಶಿಷ್ಯವೇತನ ಬಿಡುಗಡೆಗೆ ಹಣ ಕೇಳುತ್ತಿದ್ದಾರೆ ಎಂದು ವಿಶ್ವವಿದ್ಯಾಲಯದ ಸಿಬ್ಬಂದಿ, ವಿದ್ಯಾರ್ಥಿಗಳೇ ನೇರ ಆರೋಪ ಮಾಡಿದ್ದಾರೆ.ಇದು ಬಹಳ ಗಂಭೀರವಾದ ವಿಷಯವಾಗಿದ್ದು ಎಲ್ಲರೂ ತಲೆತಗ್ಗಿಸುವ ವಿಚಾರವಾಗಿದೆ ಈ ಕುರಿತು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಇನ್ನೂ ನನಗೆ ಮುಂಬಡ್ತಿ ಕೊಡಲು ಕುಲಪತಿಯವರು ₹6 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಬೋಧಕ ಹುದ್ದೆ ನೇಮಕಾತಿಯ ನಿಯಮ ಕೇಳಿದ್ದಕ್ಕೆ ನನ್ನನ್ನು ವರ್ಗಾವಣೆಗೊಳಿಸಿದ್ದಾರೆ ಎಂದು ಎಂ ಧರಣಿ ಮಲ್ಲಿಕಾರ್ಜುನಗೌಡ ಎಲ್ಲರೆದುರೇ ಸ.ಚಿ. ರಮೇಶ ವಿರುದ್ಧ ಆರೋಪ ಮಾಡಿದರು.ಧರಣಿ ನಿರತರ ಮಾತು ಆಲಿಸಿದ ಕುಲಪತಿ ಪ್ರೊ. ಸ.ಚಿ. ರಮೇಶ, ‘ನ. 20ರಂದು ಸಿಂಡಿಕೇಟ್ ಸಭೆ ನಡೆಯಲಿದೆ. ಅದರಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗು ವುದು ಎಂದರು.ಸಂಘದ ಅಧ್ಯಕ್ಷ ವಾಸುದೇವ ಬಡಿಗೇರ್ ಮಾತನಾಡಿ ‘ನವಂಬರ್ 23 ರೊಳಗೆ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸ ಲಾಗುವುದು ಈ ವಿಷಯದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.